ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಏನಿದು ಪ್ರಕರಣ?
ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು. ವರ ಕುಮಾರ್ ಅಖಿಲ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಷಮ್ ಚಕ್ ಗ್ರಾಮದನಾಗಿದ್ದು, ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ವಧುವಿನ ಮನೆಗೆ ಬಂದಿದ್ದನು. ನಂತರ ನವಜೋಡಿ ಹೂ ಮಾಲೆಗಳನ್ನು ಬದಲಾಯಿಸಿಕೊಂಡಿದ್ದಾರೆ. ಈ ವೇಳೆ ವರನ ಸ್ನೇಹಿತರು ವೇದಿಕೆ ಮೇಲೆ ಬಂದು ಡ್ಯಾನ್ಸ್ ಮಾಡುತ್ತಿದ್ದರು. ಆಗ ವರನ ಸ್ನೇಹಿತರೊಬ್ಬ ವೇದಿಕೆ ಮೇಲೆ ಬಂದೂಕನ್ನು ಹೊರತೆಗೆದು ಗಾಳಿಯಲ್ಲಿ ಗುಂಡು ಹಾರಿಸಲಾರಂಭಿಸಿದನು.
ಈ ವೇಳೆ ಬಂದೂಕಿನಲ್ಲಿ ಸಿಲುಕಿದ್ದ ಮೂರು ಗುಂಡುಗಳನ್ನು ತೆರವುಗೊಳಿಸಲು ಯತ್ನಿಸುತ್ತಿದ್ದಾಗ ಮೂರು ಗುಂಡುಗಳು ಆಕಸ್ಮಿಕವಾಗಿ ಹಾರಿವೆ. ಅದರಲ್ಲಿ ಒಂದು ವರನಿಗೆ ಮತ್ತು ಆತನ ಸಹೋದರ ಗುಡ್ಡುವಿಗೆ ತಗುಲಿವೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು,. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ವರ ಕುಮಾರ್ ಮೃತಪಟ್ಟಿದ್ದಾನೆ. ಸದ್ಯಕ್ಕೆ ವರನ ಸಹೋದರ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಸದ್ಯ ಅಪರಾಧಿ ಯಾರು ಎಂದು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಸಂಭ್ರಮಾಚರಣೆ ನಡೆಸಿ ಗುಂಡು ಹಾರಿಸಿದ್ದ ವರನ ಸ್ನೇಹಿತ ಪರಾರಿಯಾಗಿದ್ದಾನೆ. ಸದ್ಯಕ್ಕೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿದೆ ಎಂದು ದಾನ್‍ಪುರದ ಸಹಾಯಕ ಪೊಲೀಸ್ ಕಮೀಷನರ್ ಅಶೋಕ್ ಮಿಶ್ರಾ ತಿಳಿಸಿದ್ದಾರೆ.ಸದ್ಯ ಎಫ್‍ಐಆರ್ ದಾಖಲಿಸಿರುವ ಪೊಲೀಸರು, ಘಟನೆ ಕುರಿತಂತೆ ವಿಡಿಯೋ ದೃಶ್ಯಾವಳಿಯನ್ನು ಕಲೆಹಾಕಲು ಮುಂದಾಗಿದ್ದಾರೆ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಬಿಹಾರ ಪೊಲೀಸರು ಸಂಭ್ರಮಾಚರಣೆ ಫೈರಿಂಗ್‍ನ್ನು ನಿಷೇಧಿಸಿದ್ದರೂ ಕೂಡ ಇಂತಹ ಅವಘಡಗಳು ನಡೆಯುತ್ತಲೇ ಇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.