ಸುದ್ದಿ

ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

50

ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

Jayanth & Victoria, Wedding Ceremony 4/22/12

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…