ಸುದ್ದಿ

ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

205

ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ ಜನರ ಮೇಲೆ ಪ್ರವಾಹ ಪರಿಣಾಮ ಬೀರಿದೆ ಎನ್ನಲಾಗಿದೆ.

ನದಿ ನೀರು ನಿರ್ದಿಷ್ಠ ಮಟ್ಟವನ್ನು ತಲುಪಿದ್ದು, ಒಂದೆರಡು ದಿನಗಳಲ್ಲಿ ಅಪಾಯದ ಮಟ್ಟವನ್ನು ದಾಟಬಹುದು ಎಂದು ಒಳನಾಡಿನ ಜಲಮಾರ್ಗ ಪ್ರಾಧಿಕಾರದ ವಿಭಾಗ ಅಧಿಕಾರಿ ವಿ. ಗಾಂಧಿಯಾ ಅವರು ತಿಳಿಸಿದ್ದಾರೆ.ಡಿಖೋವ್, ಧನ್ಸಿರಿ, ಜಿಯಾ ಭಾರಲಿ, ಪುತಿಮರಿ ಮತ್ತು ಬೆಕಿ ನದಿಗಳು ಕೂಡ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜೋರ್ಹತ್‍ನ ನಿಮತಿ ಘಾಟ್‍ನಲ್ಲಿ ನದಿ ಈಗಾಗಲೇ ತುಂಬಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುವಾಹಟಿ ಸಮೀಪದ ದೀಪರ್ ಬಿಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಎರಡು ಮನೆಗಳು ನಾಶವಾಗಿದ್ದು, ಓರ್ವ ವ್ಯಕ್ತಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪ್ರವಾಹದಿಂದಾಗಿ ಜುಲೈ 10 ರಂದು ಸಂಜೆ 5 ಗಂಟೆಯ ಹೊತ್ತಿಗೆ ಒಟ್ಟು 13,267.74 ಹೆಕ್ಟೇರ್ ಬೆಳೆ ಪ್ರದೇಶ ನಾಶವಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‍ಡಿಎಂಎ) ವರದಿ ಮಾಡಿದೆ.

ರಾಜ್ಯದಲ್ಲಿ ಮಳೆ ನಿರಂತರವಾಗಿ ಹೆಚ್ಚಾಗಲಿದ್ದು ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು 24*7 ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸುವಂತೆ ಅಸ್ಸಾಂ ಸಿಎಂ ಸೂಚಿಸಿದ್ದಾರೆ. ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿನ ಔಷಧಿಗಳ ದಾಸ್ತಾನು ನವೀಕರಿಸಲು ಮತ್ತು ವೈದ್ಯರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಆಯುಕ್ತರಿಗೆ ಸಿಎಂ ಸೂಚಿಸಿದ್ದಾರೆ.

ಪ್ರವಾಹ ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೂ ಪರಿಣಾಮ ಬೀರಿದ್ದು, ಬ್ರಹ್ಮಪುತ್ರದಿಂದ ಬರುವ ಪ್ರವಾಹದ ನೀರು ಕಾಜಿರಂಗ ರಾಷ್ಟ್ರೀಯ ಉದ್ಯಾನದ ಕೆಲವು ಭಾಗಗಳನ್ನು ಪ್ರವೇಶಿಸಿದ್ದು, ಪ್ರಾಣಿಗಳು ತಮ್ಮ ಜೀವ ರಕ್ಷಣೆಗಾಗಿ ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‍ಡಿಆರ್‍ಎಫ್) ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಸೂಕ್ತ ಕ್ರಮ ಕೈಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…