ಸುದ್ದಿ

ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

49

ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ.

ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ ಎರಡು ಕಲರ್ ಪ್ರಿಂಟರ್‍ಗಳು, ಖಾಲಿ ಪೇಪರ್‍ಗಳು, ಸ್ಟಿಕರ್ ಕಟ್ಟರ್,ಮೊಬೈಲ್ ಹಾಗೂ ಆರೋಪಿಯ ಪಾಸ್‍ಪೋರ್ಟ್‍ ಜಪ್ತಿ ಮಾಡಿದ್ದಾರೆ.

2017ರಲ್ಲಿ ಪ್ರವಾಸಿ ವೀಸಾದ ಮೂಲಕ ಬಾರತಕ್ಕೆ ಆಗಮಿಸಿದ್ದ ಈತ ವೀಸಾವನ್ನು ನವೀಕರಣ ಮಾಡದೆ ಇಲ್ಲೇ ನೆಲೆಸಿದ್ದಾನೆ.ಅಲ್ಲದೆ ಇಲ್ಲಿನ ಹಣವನ್ನು ಕಲರ್‍ಪ್ರಿಂಟರ್ ಮೂಲಕ ನಕಲಿ ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…