ಸುದ್ದಿ

ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

61

ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ.

ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ ರಸ್ತೆ ನಿರ್ಮಿಸುವ ಮೂಲಕ ತ್ಯಾಜ್ಯ ನಿರ್ವಹಣೆಯ ಹೊಸ ಯೋಜನೆಗೆ ಮಾದರಿಯಾಗಿತ್ತು. ಇದೀಗ ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ನಗರ ಕಸ ಕೊಡಿ ಆಹಾರ ಸ್ವೀಕರಿಸಿ ಎಂಬ ವಿನೂತನ ಆಫರ್ ನೀಡಿದೆ.

ಕಸ ವಿಲೇವಾರಿ ಸಮಸ್ಯೆಯನ್ನು ಕಡಿಮೆ ಮಾಡಲು ವಿನೂತನ ಯೋಜನೆಯೊಂದನ್ನು ಶುರುಮಾಡಿದ್ದಾರೆ, ಅದೇನೆಂದರೆ, ಗಾರ್ಬೇಜ್ ಹೋಟೆಲ್. ಈ ಹೋಟೆಲ್ ನ ವಿಶೇಷತೆ ಏನೆಂದರೆ, ಇಲ್ಲಿ ಹಣದ ಬದಲಿಗೆ ಕಸವನ್ನು ಪಡೆಯಲಾಗುತ್ತದೆ. ಉದಾಹರಣೆಗೆ 500ಗ್ರಾಂ ಕಸ ತಂದವರಿಗೆ ತಿಂಡಿ, ಹಾಗು 1ಕೆಜಿ ಕಸ ತಂದವರಿಗೆ ಊಟವನ್ನು ಇಲ್ಲಿ ಉಚಿತವಾಗಿ ಕೊಡುತ್ತಾರಂತೆ.

ಈ ಹೋಟೆಲ್ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಗರದ ಬಸ್ ನಿಲ್ದಾಣದ ಬಳಿ ಆರಂಭಿಸಬೇಕೆಂದು ಅಂಬಿಕಾಪುರದ ಪಾಲಿಕೆ ತೀರ್ಮಾನಿಸಿದೆ. ಈ ರೀತಿ ಮಾಡುವುದರಿಂದ ಎಲ್ಲೆಂದರಲ್ಲಿ ಕಸ ಹಾಕುವುದು ಕಡಿಮೆಯಾಗುತ್ತದೆ, ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಹಾಯವಾಗುತ್ತದೆ.ಸಧ್ಯ ಈ ಯೋಜನೆ ಕಸ, ಪೇಪರ್ ಆಯುವವರಿಗೆ ಮೀಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಪಾಲಿಕೆ ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.