ಸುದ್ದಿ

ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

53

ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| 

ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ ಹಾಗೂ ನೇಕಾರ ಸಮುದಾಯಕ್ಕೆ ಭರ್ಜರಿ ಯೋಜನೆ ಘೋಷಿಸಿದ್ದಾರೆ.ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ವಯ ರೈತರಿಗೆ ದೊರೆಯುತ್ತಿದ್ದ ವಾರ್ಷಿಕ 6 ಸಾವಿರ ರೂ.ಗೆ ರಾಜ್ಯ ಸರ್ಕಾರ 4 ಸಾವಿರ ರೂ. ಅಧಿಕವಾಗಿ ಕೊಡಲಿದೆ. ಅಂದರೆ ರಾಜ್ಯದ ರೈತ ಈ ಯೋಜನೆಯಡಿ ವಾರ್ಷಿಕವಾಗಿ ಒಟ್ಟು 10 ಸಾವಿರ ರೂ. ಸಿಗಲಿದೆ.

ರಾಜ್ಯ ಸರ್ಕಾರ ಕೊಡಮಾಡುವ 4 ಸಾವಿರ ರೂ. ಅನ್ನು ಎರಡು ಕಂತುಗಳಲ್ಲಿ ರೈತರಿಗೆ ಸಂದಾಯ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ರೈತರಿಗೆ ಕೇಂದ್ರದ 6 ಸಾವಿರ ರೂ. ಹಾಗೂ ರಾಜ್ಯದ 4 ಸಾವಿರ ರೂ.  ಸೇರಿದಂತೆ ಒಟ್ಟು 10 ಸಾವಿರ ರೂ. ಸಿಗಲಿದೆ.

ನೇಕಾರ ಸಮುದಾಯಕ್ಕೆ ಬಂಪರ್  :   ಇದೇ ವೇಳೆ ರಾಜ್ಯದ ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿರುವ ಸಿಎಂ, ನೇಕಾರ ಸಮುದಾಯಕ್ಕೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ.  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಉಪಯುಕ್ತ ಮಾಹಿತಿ

    ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

    ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…