ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್.ವಿ. ದೇಶಪಾಂಡೆ ಕೂಡ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅತೃಪ್ತರಿಗೆ ಬಿಗ್ ಶಾಕ್; ಕಾಂಗ್ರೆಸ್ನ 11, ಜೆಡಿಎಸ್ನ 3 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್
ಕಳೆದ ವಾರ ಕಾಂಗ್ರೆಸ್ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್.ಆರ್. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್ನ ಕೆ. ಗೋಪಾಲಯ್ಯ, ಕೆ.ಆರ್. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.