ಸುದ್ದಿ

ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

47

ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ.

ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ, ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಮಂಗಳೂರಿನಿಂದ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನ ಮೊಗರು ಎಂಬಲ್ಲಿ ಕಾರು ಚಾಲಕನಿಗೆ ಹೇಳಿ ಕೆಳಗಿಳಿದಿದ್ದರು.

 ‘ಇಲ್ಲೇ ಇರು, ಈಗ ವಾಪಸ್‌ ಬರುತ್ತೇನೆ ಎಂದು ಸೂಚಿಸಿ ಮೊಬೈಲ್‌ನಲ್ಲಿ ಮಾತನಾಡುತ್ತ ತೆರಳಿದ್ದರು. ಅರ್ಧ ಗಂಟೆ ಕಳೆದರೂ ವಾಪಸ್‌ ಬರದಿದ್ದುದರಿಂದ ಸಿದ್ಧಾರ್ಥ ಅವರ ಮೊಬೈಲ್‌ಗೆ ಕರೆ ಮಾಡಿದೆ. ಫೋನ್‌ ಸ್ವಿಚ್‌ ಆಫ್‌ ಆಗಿತ್ತು. ಗಾಬರಿಯಾಗಿ ಮನೆಯವರಿಗೆ ತಿಳಿಸಿದೆ’ ಎಂದು ಕಾರಿನ ಚಾಲಕ ಹೇಳಿರುವುದಾಗಿ ತಿಳಿದು ಬಂದಿದೆ.

ಸಿದ್ಧಾರ್ಥ ಕಾರಿನಿಂದ ಇಳಿದ ಜಪ್ಪಿನ ಮೊಗರು ಎಂಬ ಸ್ಥಳ ನೇತ್ರಾವತಿ ನದಿ ತಟದಲ್ಲೇ ಇದ್ದು, ಇದು ಕುಟುಂಬಸ್ಥರ ಆತಂಕ ಹೆಚ್ಚಲು ಕಾರಣವಾಗಿದೆ.ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್‌ ನೇತೃತ್ವದಲ್ಲಿ ಭಾರೀ ಸಂಖ್ಯೆಯ ಪೊಲೀಸರು ಶೋಧ ನಡೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ