ಸುದ್ದಿ

ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

43

ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ‌‌ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್​.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….