ಸುದ್ದಿ

ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

111

ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡಿಗೆ ಸೇರಿಸಿದ್ದಾರೆ.

ಚಿಕಿತ್ಸೆಯ ನಂತರ ಈ ವಿಚಾರದ ಬಗ್ಗೆ ಮಾತನಾಡಿರುವ ಹಿರಾ ಪತ್ನಿ ಬೇಬಿ, ಮೊರಾದಾಬಾದ್ ನಿವಾಸಿಯಾದ ನನ್ನ ಪತಿ ನನ್ನನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಅವನು ರೈಲಿನಿಂದ ಹಾರಿದ್ದಾನೆ ಎಂದು ಆರೋಪ ಮಾಡಿದ್ದಾಳೆ. ಒಂದು ದಿನದ ಹಿಂದೆ ಹಿರಾ ಜೊತೆ ದೇವಸ್ಥಾನದಲ್ಲಿ ಪ್ರೇಮ ವಿವಾಹವಾಗಿದ್ದೇವು ಎಂದು ಹೇಳಿದ್ದಾಳೆ.

ನನಗೆ ಕೆಳದ ಮೂರು ತಿಂಗಳಿನಿಂದ ಅಪರಿಚಿತ ಸಂಖ್ಯೆಯಿಂದ ಹಿರಾ ಕರೆ ಮಾಡುತ್ತಿದ್ದ. ನಂತರ ನಾನು ಅವರ ಜೊತೆ ಮಾತನಾಡುತ್ತಿದ್ದೆ. ನಮ್ಮಿಬ್ಬರ ನಡುವೆ ಪ್ರೀತಿ ಬೆಳೆಯಿತು. ಇಬ್ಬರು ಸೇರಿ ಮದುವೆಯಾಗಲು ತೀರ್ಮಾನ ಮಾಡಿ, ಮನೆಯಿಂದ ಓಡಿಹೋದೆವು. ಜುಲೈ 26 ರಂದು ಹಿರಾ ಟೆನ್ಸುಕಿಯನಗೆ ಬಂದು ನನ್ನನ್ನು ಕರೆದುಕೊಂಡು ಬಂದ. ನಂತರ ಅಲ್ಲಿಂದ ಪಾಟ್ನಾ ತಲುಪಿದೆವು. ಎರಡು ದಿನಗಳ ಕಾಲ ಹೋಟೆಲ್‍ನಲ್ಲಿ ಉಳಿದುಕೊಂಡು ಜುಲೈ 29 ರಂದು ದೇವಾಲಯವೊಂದರಲ್ಲಿ ಮದುವೆಯಾದೆವು ಎಂದು ಬೇಬಿ ಪೊಲೀಸರಿಗೆ ತಿಳಿಸಿದ್ದಾಳೆ.

ಈ ವಿಚಾರದ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಸಿಂಗ್, ಬೇಬಿ ಗಂಭೀರ ಸ್ಥಿತಿಯಲ್ಲಿಂದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡಲು ರೈಲ್ವೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…