ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2025

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…