ಸುದ್ದಿ

ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

74

ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು.


ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು ವರ್ಷಗಳ ಹಿಂದೆ ದುಬೈನಲ್ಲಿ ಚಾಲಕನಾಗಿ ವೃತ್ತಿ ಮಾಡುತ್ತಿದ್ದರು. ಬಳಿಕ ಸ್ವದೇಶಕ್ಕೆ ಹಿಂತಿರುಗಿ ಕೃಷಿ ಕಾರ್ಯ ಮಾಡುತ್ತಿದ್ದರು. ಆದರೆ ಹಲವು ಸಮಸ್ಯೆಯ ಕಾರಣಕ್ಕಾಗಿ ದುಬೈಯಲ್ಲಿ ಉದ್ಯೋಗ ಹುಡುಕುವ ಕನಸನ್ನು ಕಂಡಿದ್ದರು. ಇದಕ್ಕಾಗಿ 45 ವರ್ಷಗಳ ಹಿಂದೆ ದುಬೈ ತೆರಳಿದ್ದರು. ಆದರೆ ಕೆಲವು ದಿನಗಳ ಕಾಲ ಕೆಲಸವನ್ನು ಅರಸುತ್ತಾ ದುಬೈಯಲ್ಲೇ ಇದ್ದರು. ಆದರೆ ಕೆಲಸ ಎಲ್ಲಿಯೂ ಇವರ ಕೈ ಹಿಡಿಯಲಿಲ್ಲ.

ಉಪಾಯ ಇಲ್ಲದೆ ಹೆಂಡತಿ ಪದ್ಮ ಅವರಿಂದ 20 ಸಾವಿರ ಪಡೆದು 3 ಅದೃಷ್ಟ ಕೂಪನ್ “ರಾಫೆಲ್’ ಅನ್ನು ಪಡೆಯಲು ಆಸಕ್ತಿ ಹೊಂದುತ್ತಾರೆ. ಇದರ ಸಲುವಾಗಿ ಅಬುದಾಬಿಯಲ್ಲಿ ಕೆಲಸದಲ್ಲಿರುವ ಗೆಳೆಯ ರವಿ ಅವರಲ್ಲಿ ನೀಡಿದ್ದರು. ರವಿ ರಿಕ್ಕಳ ಅವರ ಹೆಸರಿನಲ್ಲಿ ಅದೃಷ್ಟ ಚೀಟಿ ಖರೀದಿಸಿದ್ದರು. ಬಳಿಕ ಇವರು ಮತ್ತೆ ಬರೀ ಕೈಯಲ್ಲಿ ಸ್ವದೇಶಕ್ಕೆ ಹಿಂದಿರುಗಿದ್ದರು.

ದುಬೈನ ಕರಾಳ ದಿನದ ನೆನಪು ಮರೆಯಾಗುವ ಸಮಯಕ್ಕೆ ಅದೃಷ್ಟ ಚೀಟಿ ಅವರ ಕೈ ಹಿಡಿದಿದೆ. 4.08 ಮಿಲಿಯನ್ ಡಾಲರ್ (ಅಂದರೆ 28.45 ಕೋ.ರೂ) ಅದೃಷ್ಟವನ್ನು ರಿಕ್ಕಳ ಅವರು ಬಾಚಿಕೊಂಡಿದ್ದಾರೆ. ಕೆಲಸ ಕೈಕೊಟ್ಟರೆ ಏನಾಯಿತು, ಅದೃಷ್ಟ ಕೈ ಕೊಡಲಿಲ್ಲ. ರಿಕ್ಕಳ ಮತ್ತು ಪತ್ನಿ ಪದ್ಮ ಅವರಿಗೆ 2 ಹೆಣ್ಣು ಮಕ್ಕಳಿದ್ದಾರೆ. ನನ್ನ ಈ ಸಂಭ್ರಮಕ್ಕೆ ನನ್ನ ಪತ್ಮಿಯೇ ಕಾರಣ ಎಂದು ರಿಕ್ಕಳ ಅವರು ಹೇಳಿದ್ದಾರೆ.ರಿಕ್ಕಳ ಅವರ ಈ ಯಶೋಗಾಥೆಯನ್ನು ಗಲ್ಫ್ ಪತ್ರಿಕೆಗಳು ವರದಿ ಮಾಡಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…