ಸುದ್ದಿ

ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

65

ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ..

ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ. ಹೆಣ್ಣು ಮಕ್ಕಳು ಶೌಚಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಶಾಲೆಯ ಆವರಣದಲ್ಲಿರುವ ಶಿಥಿಲಗೊಂಡ ಕಟ್ಟಡ ತೆರವುಗೊಳಿಸದೆ ಇರುವ ಪರಿಣಾಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಥಿಲಗೊಂಡಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆಯ ನವೀಕರಣ ಕಾರ್ಯಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಳ್ಳುತ್ತಲೇ ಇದ್ದರೂ ಯಾವೊಬ್ಬ ರಾಜಕಾರಣಿಗಳು ಕೂಡ ಇತ್ತ ಗಮನ ಹರಿಸಿರಲಿಲ್ಲ. ಇದೀಗ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಶಾಲೆಯ ಪುನರ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ..

ಮೂಲ ಭೂತ ಸೌಕರ್ಯಗಳು ಇಲ್ಲದ ಈ ಶಾಲೆಯನ್ನು ಪುನರ್ ನಿರ್ಮಾಣ ಮಾಡಿ ಮಾದರಿ ಶಾಲೆಯನ್ನಾಗಿ ಮಾಡಲು ಸಂಸದ ಜಿಸಿ ಚಂದ್ರಶೇಖರ್ ನಿರ್ಧರಿಸಿದ್ದಾರೆ. ಈ ಕಾರ್ಯಕ್ಕಾಗಿ ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ತೀರ್ಮಾನಿಸಿದ್ದು ಈ ನಿರ್ಬಂಧಗಳನ್ನು ಹೊರಡಿಸುವಂತೆ ಜಿ.ಸಿ.ಚಂದ್ರಶೇಖರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರೀ ಶಾಲೆಗಳ ಉಳಿವಿಗೆ ಕೈ ಜೋಡಿಸಿದ್ದಾರೆ. 


ಇನ್ನು ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೂಡ ಬರೆದುಕೊಂಡಿರುವ ಸಂಸದರು “ಬೆಂಗಳೂರು ಕೇಂದ್ರ ಭಾಗದಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರ , ಸೋಶಿಯಲ್ ಮೀಡಿಯಾದಲ್ಲಿ ಕಂಡ ಗೆಳೆಯ ಸಯ್ಯದ್ ಹುಸೆನ್ನ್ ನನ್ನ ಗಮನಕ್ಕೆ ತಂದಿದ್ದು , ಈ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡಲು ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ನಿರ್ಧರಿಸಿದ್ದೇನೆ.” ಎಂದು ಟ್ವೀಟ್ ಮಾಡಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.