ಸುದ್ದಿ

ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

56

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ.

ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ ಪಾಕ್ ಪ್ರಧಾನಿ ಅವರು ಕಾಶ್ಮೀರದ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದಾಗ, ಕಾಶ್ಮೀರದ ಸ್ಥಾನಮಾನವನ್ನು ಬದಲಾಯಿಸುವುದು ಕಾನೂನುಬಾಹಿರ, ಅಕ್ರಮ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ. ಭಾರತದ ಈ ನಡೆಯು ಪರಮಾಣು ಸಾಮರ್ಥ್ಯವುಳ್ಳ ನೆರೆ ರಾಷ್ಟ್ರಗಳ ಜೊತೆಗಿರುವ ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ ಎಂದು ಹೇಳಿದ್ದರು ಎನ್ನಲಾಗಿದೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರವನ್ನು ವಿವಾದಗ್ರಸ್ತ ಪ್ರದೇಶ ಎಂದು ಗುರುತಿಸಲಾಗಿದೆ. ಆದ್ದರಿಂದ ಈ ವಿಷಯದಲ್ಲಿ ಭಾರತ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಳ್ಳುವುದು ಸರಿಯಲ್ಲ. ಕಣಿವೆ ರಾಜ್ಯ ಹಾಗೂ ಪಾಕಿಸ್ತಾನದ ಜನ ಇದನ್ನು ಒಪ್ಪುವುದಿಲ್ಲ ಎಂದು ಪಾಕ್ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಪಾಕ್ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮೊದಲೇ ಅರಿತ್ತಿದ್ದ ಭಾರತವು ರಾಜ್ಯಸಭೆಯಲ್ಲಿ ಘೋಷಣೆಯಾಗುತ್ತಿದ್ದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಬ್ರಿಟನ್, ರಷ್ಯಾ, ಫ್ರಾನ್ಸ್, ಜರ್ಮನಿಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಪರಿಚ್ಛೇಧ 370, 35ಎ ರದ್ದು ಮಾಡುವ ಬಗ್ಗೆ ಮಾಹಿತಿ ನೀಡಿತ್ತು.ಭಾರತ ಜಮ್ಮು-ಕಾಶ್ಮೀರದ ಮೇಲೆ ತೆಗೆದುಕೊಂಡಿರುವ ಕ್ರಮದಿಂದ ಪಾಕಿಸ್ತಾನ ಕೆಂಗೆಟ್ಟಿದ್ದು, ಪಾಕ್ ಅಧ್ಯಕ್ಷ ಆರೀಫ್ ಅಲ್ವಿ ಅವರು ಮಂಗಳವಾರ ದಿಢೀರ್ ಸಂಸತ್ತಿನ ಜಂಟಿ ಅಧಿವೇಶನ ಕರೆದಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…