ಸುದ್ದಿ

ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

141

ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.