ಜ್ಯೋತಿಷ್ಯ

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

53

ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ.

ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು ಹಾರದೆ ಇದ್ದರೂ ಕನಿಷ್ಟ ಹೆಲಿಕಾಪ್ಟರ್ ರೀತಿ ಕಾಣುವಂತೆ ಸಿದ್ಧಪಡಿಸುವುದು ಆತನ ಗುರಿಯಾಗಿತ್ತು.ಈ ಕಾರು ನೋಡಲು ಹೆಲಿಕಾಪ್ಟರ್ ರೀತಿ ಕಾಣಿಸುತ್ತದೆ ಆದರೆ ಇದು ಹಾರಾಡುವುದಿಲ್ಲ. ಹೆಲಿಕಾಪ್ಟರ್‍ನ ಮೂಲ ವಿನ್ಯಾಸ ಹೇಗೆ ಇರುತ್ತದೋ ಅದೇ ರೀತಿ ಕಾರನ್ನು ಯುವಕ ವಿನ್ಯಾಸಗೊಳಿಸಿದ್ದಾನೆ. ಈ ಅಪರೂಪದ ವಿನ್ಯಾಸವನ್ನು ಪೂರ್ಣಗೊಳಿಸಲು ಮಿಥಿಲೇಶ್ ಮತ್ತು ಅವರ ಸಹೋದರ ಸುಮಾರು ಏಳು ತಿಂಗಳು ತೆಗೆದುಕೊಂಡಿದ್ದಾರೆ.

ಅಲ್ಲದೆ ಇದಕ್ಕೆ ಸರಿಸುಮಾರು ಏಳು ಲಕ್ಷ ರೂಪಾಯಿಗಳನ್ನು ಸಹೋದರರು ಖರ್ಚು ಮಾಡಿದ್ದಾರೆ ಎನ್ನಲಾಗಿದೆ.ಈ ಹೆಲಿಕಾಪ್ಟರ್ ಕಾರು ವಿನ್ಯಾಸದ ಬಗ್ಗೆ ಮಾತನಾಡಿರುವ ಮಿಥಿಲೇಶ್, ‘ ನಾನು ಹೆಲಿಕಾಪ್ಟರ್ ಅನ್ನು ಸ್ವಂತವಾಗಿ ನಿರ್ಮಿಸಿ ಅದರಲ್ಲಿ ಹಾರಾಟ ನಡೆಸಬೇಕೆಂದು ಬಾಲ್ಯದಿಂದಲೂ ಕನಸು ಕಂಡಿದ್ದೆ. ಆದರೆ ನನಗೆ ಬಲವಾದ ಹಿನ್ನೆಲೆ ಇಲ್ಲ ಆದ್ದರಿಂದ ನನ್ನ ಕಾರನ್ನು ಹೆಲಿಕಾಪ್ಟರ್ ರೀತಿ ಕಾಣುವಂತೆ ಮಾಡಿದೆ’ ಎಂದು ಖುಷಿಯನ್ನು ಹಂಚಿಕೊಂಡಿದ್ದಾನೆ.

ಈ ಹೆಲಿಕಾಪ್ಟರ್ ಕಾರಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ಕೆಲವರು ಯುವಕನ ಪ್ರಯತ್ನವನ್ನು ಮೆಚ್ಚಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರೀತಿ ಕಾರನ್ನು ವಿನ್ಯಾಸ ಮಾಡಿಕೊಂಡು ರಸ್ತೆಗಿಳಿಸಿದರೆ ಇತರೆ ವಾಹನ ಸವಾರರಿಗೆ ತೊಂದರೆ ಆಗುತ್ತದೆ. ತನ್ನ ಕನಸು ನನಸಾಗಿಸಿಕೊಳ್ಳಲು ಇತರರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…