ಸುದ್ದಿ

ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

170

ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ.


ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ದೊಡ್ಡ ಪ್ರಮಾದಕಂಡುಬಂದಿತ್ತು.

ಮೊದಲವರ್ಷದ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕ ಗಳಿಸಿದ್ದ ವಿದ್ಯಾರ್ಥಿಗಳು ಎರಡನೇ ವರ್ಷದಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ವಿವಿಧ ವಿಷಯಗಳಲ್ಲಿ ಕೇವಲ ಸೊನ್ನೆ, ಒಂದು ಹಾಗೂ ಎರಡುಅಂಕಗಳನ್ನು ಮಾತ್ರ ಕೊಡಲಾಗಿದೆ ಎಂದು ಸಾಕಷ್ಟು ದೂರುಗಳನ್ನು ವಿದ್ಯಾರ್ಥಿಗಳು ಸಲ್ಲಿಸಿದ್ದರು.ಈರೀತಿಯ ಪ್ರಕರಣಗಳಿಂದ ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಲ್ಲಿ ತಳಮಳ ಉಂಟುಮಾಡಿದೆ.ಪರೀಕ್ಷೆಯಲ್ಲಿ ಫೇಲ್​ ಆಗುವುದರಿಂದ ಜೀವನವೇ ಮುಗಿದುಹೋಯಿತು ಎಂಬುದಕ್ಕೆ ಅರ್ಥವಿಲ್ಲ. ಹೀಗಾಗಿವಿದ್ಯಾರ್ಥಿಗಳ ಆತ್ಮಹತ್ಯೆಯ ಯೋಚನೆ ಮಾಡಬೇಡಿ ಎಂದು ಕೆಸಿಆರ್​ ಮನವಿ ಮಾಡಿಕೊಂಡಿದ್ದಾರೆ.

ಈ ವರ್ಷ 4,09,133 ವಿದ್ಯಾರ್ಥಿಗಳು ನಿಯಮಿತ ಪದ್ದತಿಯಂತೆ ಮೊದಲ ವರ್ಷದ ಪರೀಕ್ಷೆಯನ್ನು ಎದುರಿಸಿದ್ದು, ಅದರಲ್ಲಿ 2,47,407 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ವರ್ಷದಲ್ಲಿ 3,82,534 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2,47,555 ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದಾರೆ. ಪರೀಕ್ಷಾ ಫಲಿತಾಂಶದಲ್ಲಿನ ಪ್ರಮಾದದ ತನಿಖೆಗಾಗಿ ಈಗಾಗಲೇ ಸಮಿತಿಯೊಂದನ್ನು ರಚಿಸಿದ್ದು, ಸಮಿತಿ ತನ್ನ ವರದಿಯನ್ನೂ ಕೂಡ ಸಲ್ಲಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.  ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.  ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…