ಸುದ್ದಿ

ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

47

ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ.

ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ ವೇಳೆ ಆಕ್ರೋಶಗೊಂಡು ಪೊಲೀಸ್ ಬೀಟ್ ಹೌಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕಲ್ಲು ತೂರಾಟ ನಡೆಸಿದವರಲ್ಲಿ ಪೊಲೀಸಮ್ಮನಿಂದ ಒದೆಸಿಕೊಂಡ ಪ್ರಿಯಾಳ ಪತಿ ಉತ್ತಮ್ ಡೇ ಕೂಡ ಇದ್ದ. ಆತನನ್ನು ಎಳೆದೊಯ್ಯಲು ಸುಂದರ್ ಗಢ್ ನ ಎಸ್ಪಿ ಸೌಮ್ಯ ಮಿಶ್ರಾ ಬಂದಿದ್ದರು. ಇದಕ್ಕೆ ಅಡ್ಡಿಪಡಿಸಿದಾಗ ತುಂಬು ಗರ್ಭಿಣಿ ಪ್ರಿಯಾಳ ಹೊಟ್ಟೆಗೆ ಜಾಡಿಸಿ ಕಾಲಿನಿಂದ ಒದ್ದಿದ್ದಾರೆ.

ಒದ್ದ ರಭಸಕ್ಕೆ ಅಸ್ವಸ್ಥಳಾದ ಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಜುಲೈ 4 ರಂದು ಗರ್ಭಪಾತವಾಗಿದೆ. ಈ ಸಂಬಂಧ ಪ್ರಿಯಾ, ಸಬ್ ಡಿವಿಶನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೆ ದೂರು ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುರಹಂಕಾರಿ ಅಧಿಕಾರಿ ಸೌಮ್ಯ ಮಿಶ್ರಾ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ. ಇದರನ್ವಯ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…