ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ. ಇದೊಂದು ಅಪರೂಪದ ಘಟನೆ ಎಂದೇ ಹೇಳಬೇಕು.
ಇನ್ನು ಇವರ ಕುಟುಂಬದ ಹಿನ್ನೆಲೆ ನೋಡಿದರೆ ತಂದೆ ಇಲ್ಲ. ತಾಯಿ ದಿನಗೂಲಿ ಮಾಡುತ್ತಾ ವೃತ್ತಿಯಲ್ಲಿ ಅಗಸರಾಗಿರುವ ಇವರದು ತುಂಬಾ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ. ಇಂತಹ ಸ್ಥಿತಿಯಲ್ಲಿ ಮೂವರು ಹೆಣ್ಣುಮಕ್ಕಳನ್ನು ಓದಿಸಿ ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ನಿಜಕ್ಕೂ ಮೆಚ್ಚಬೇಕಾದ ಸಂಗತಿ.ಅದೆಷ್ಟೋ ಅವಕಾಶಗಳು, ಆರ್ಥಿಕ ಸಂಪನ್ಮೂಲ, ಕುಟುಂಬದಲ್ಲಿ ತೊಂದರೆ ಇಲ್ಲದೆ, ಎಲ್ಲಾ ಸೌಲಭ್ಯಗಳಿದ್ದು, ರಾಜಕೀಯವಾಗಿ ಪ್ರಬಲವಾಗಿದ್ದರೂ ಆ ಮಟ್ಟಕ್ಕೆ ಬೆಳೆಯುವುದು ನಿಜಕ್ಕೂ ಕಷ್ಟ. ಆದರೆ ಮೂವರು ಕಷ್ಟಪಟ್ಟು ಓದಿ ಈಗ ಭಾವಿ ಭಾರತ ಪೌರರಿಗೆ ಸ್ಫೂರ್ತಿಯಾಗಿದ್ದಾರೆ.ಅವರ ದೃಢ ಸಂಕಲ್ಪ, ಆತ್ಮವಿಶ್ವಾಸ ನೋಡಿದರೆ ಮೂಕವಿಸ್ಮಿತರಾಗುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗೆ ಸಿವಿಲ್ ಸರ್ವಿಸಸ್ (IASಗೆ ಆಯ್ಕೆ) ಆಗಿರುವುದೆ ದೊಡ್ಡದಾದರೆ, ಇನ್ನು ಇವರು ಮೂವರು ಹೆಣ್ಣುಮಕ್ಕಳಾಗಿರುವುದು, ಅದರಲ್ಲೂ ಆರ್ಥಿಕವಾಗಿ ಹಿಂದುಳಿದ, ಅಗಸ ವೃತ್ತಿಯಲ್ಲಿದ್ದುಕೊಂಡು, ಇವೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಗುರಿ ಸಾಧಿಸಿರುವುದು ನಿಜಕ್ಕೂ ಗ್ರೇಟ್.
ಇವರ ಹಿಂದಿನ ಶಕ್ತಿ ಆ ಮಾತೃಮೂರ್ತಿ. ಅಂತಹ ಮಟ್ಟಕ್ಕೆ ಅವರನ್ನು ಮುಟ್ಟಿಸಿದ ಆ ಮಾತೃಮೂರ್ತಿಗೆ ಕೋಟಿ ವಂದನೆಗಳು. ಅತ್ಯುನ್ನತ ಸ್ಥಾನಕ್ಕೆ ತಲುಪಿದ ಆ ಮೂವರು ಅಕ್ಕತಂಗಿಯರಿಗೂ ಅಭಿನಂದನೆಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…