ಸುದ್ದಿ

ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

32

 

ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು.

ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಆ.21 ರಂದು ಕ್ಯಾತಸಂದ್ರ ವ್ಯಾಪ್ತಿಯ ಹಿರೇಗಹಳ್ಳಿ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿರುವ ಸಿಂಗೋನಹಳ್ಳಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬೈಕನ್ನು ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿ ಕ್ಯಾತಸಂದ್ರ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.

ಈತನಿಂದ 5 ಲಕ್ಷ ರೂ. ಮೌಲ್ಯದ 14 ಮೋಟಾರ್‍ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. 2016ರಲ್ಲಿ ಗೌರಿಬಿದನೂರು ಪೊಲೀಸರು ಈತನನ್ನು ಬಂಧಿಸಿ 18 ಬೈಕ್‍ಗಳನ್ನು ವಶಪಡಿಸಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.ಆರೋಪಿ ವಿರುದ್ಧ ಗೌರಿಬಿದನೂರು, ದೊಡ್ಡಬಳ್ಳಾಪುರ, ಯಲಹಂಕ ಠಾಣೆಗಳಲ್ಲೂ ಸಹ ಕಳವು ಪ್ರಕರಣಗಳು ದಾಖಲಾಗಿವೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಹೆಚ್ಚುವರಿ ಎಸ್‍ಪಿ ಡಾ.ಶೋಭಾರಾಣಿ ಮಾರ್ಗದರ್ಶನದಲ್ಲಿ ನಗರ ಉಪವಿಭಾಗದ ಪೊಲೀಸ್ ಉಪಅಧೀಕ್ಷಕ ತಿಪ್ಪೇಸ್ವಾಮಿ, ಕ್ಯಾತಸಂದ್ರ ವೃತ್ತನಿರೀಕ್ಷಕರಾದ ಶ್ರೀಧರ್ ನೇತೃತ್ವದಲ್ಲಿ ಪಿಎಸ್‍ಐ ರಾಜು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿಕೃಷ್ಣ ಆಭಿನಂದಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….