ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ

ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ರೈಲ್ವೆ ಸಚಿವ ಪಿಯೂಶ್ ಗೋಯಲ್‌ಗೆ ಪತ್ರ ಬರೆದಿದ್ದೇನೆ,”ಎಂದು ಗಡ್ಕರಿ ಹೇಳಿದ್ದಾರೆ. ಪ್ರಸ್ತುತ ವಾರಾಣಸಿ ಮತ್ತು ರಾಯ್ ಬರೇಲಿಯ ಎರಡು ರೈಲ್ವೆ ನಿಲ್ದಾಣಗಳಲ್ಲಿ ಜೇಡಿ ಮಣ್ಣಿನಿಂದ ಮಾಡಿದ ಲೋಟಗಳು, ಕುಡಿಕೆಗಳು ಮತ್ತು ತಟ್ಟೆಗಳನ್ನು ಬಳಸಲಾಗುತ್ತಿದೆ. ಇದನ್ನು ದೇಶದ ಇತರೆ ರೈಲ್ವೆ ನಿಲ್ದಾಣಗಳಿಗೂ ವಿಸ್ತರಿಸಬೇಕು ಎನ್ನುವುದು ಗಡ್ಕರಿ ಅವರ ಸಲಹೆ.

”ಏರ್‌ಪೋರ್ಟ್‌ಗಳು ಮತ್ತು ರಾಜ್ಯ ಸಾರಿಗೆ ಸಂಸ್ಥೆಗಳ ಅಧೀನದಲ್ಲಿ ಬರುವ ಬಸ್ ಡಿಪೋಗಳಲ್ಲಿನ ಟೀ ಸ್ಟಾಲ್‌ಗಳಲ್ಲಿ ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕು. ನಾವು ಮಾಲ್‌ಗಳಲ್ಲೂ ಇಂಥ ವ್ಯವಸ್ಥೆಗೆ ಉತ್ತೇಜನ ನೀಡಬೇಕು,”ಎಂದು ಗಡ್ಕರಿ ಹೇಳಿದ್ದಾರೆ. ಇದೇ ವೇಳೆ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ(ಕೆವಿಐಸಿ) ನಿರ್ದೇಶನ ನೀಡಿದ್ದಾರೆ.

ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸರಕಾರವು ಸಶಕ್ತಿಕರಣ್ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಚಕ್ರಗಳನ್ನು ವಿತರಿಸುತ್ತಿದೆ. ಮಡಿಕೆ ಉತ್ಪಾದಕರನ್ನು ಉತ್ತೇಜಿಸಲು2004ರಲ್ಲಿಯೇ ರೈಲ್ವೆ ಸಚಿವರು ಮಣ್ಣಿನ ಲೋಟಗಳನ್ನು ಬಳಸುವ ಪದ್ಧತಿಗೆ ಚಾಲನೆ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.