ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್ ರಸ್ತೆ, ಸದಾಶಿವನಗರ, ನೇಚರ್ಸ್ ಬ್ಯಾಸ್ಕೆಟ್, ನಾಮ್ ದಾರಿ, ನಿಲಗೀರಿಸ್ ಸೂಪರ್ ಮಾರ್ಕೆಟ್ ಗಳ ಮೇಲೆ ದಾಳಿ ನಡೆಸಿದ ಸುಧಾಕರ್, ಪ್ಲಾಸ್ಟಿಕ್ ಬಳಕೆ ಕಂಡು ಗರಂ ಆದರು. ದೊಡ್ಡ ದೊಡ್ಡ ಮಳಿಗೆಗಳು ಹಾಗೂ ಕಂಪನಿಗಳು ಮೊದಲು ಕಾನೂನು ಪಾಲಿಸಬೇಕು. ಇವರೇ ಪ್ರಾರಂಭಿಸಿಲ್ಲ ಅಂದರೆ ಇನ್ನಿತರ ಚಿಕ್ಕ ಅಂಗಡಿಗಳು ಹೇಗೆ ಅನುಸರಿಸುತ್ತಾರೆ. ಅಂತಹ ಮಳಿಗೆಗಳಿಗೆ ಎಚ್ಚರಿಕೆ ನೀಡಿದ್ದು, ಬಟ್ಟೆ ಬ್ಯಾಗ್ ಗಳನ್ನು ಬಳಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್, ಪ್ರತಿನಿತ್ಯ ದಾಳಿ ನಡೆಸುವುದಾಗಿ ತಿಳಿಸಿದರು. ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ರದ್ದುಗೊಳಿಸಲಾಗಿದ್ದು, ಪೇಪರ್ ಬ್ಯಾಗ್ ಮತ್ತು ಬಾಳೆ ಎಲೆಗಳನ್ನು ಬಳಸುತ್ತಿರುವುದಾಗಿ ನೇಚರ್ ಬ್ಯಾಸ್ಕೆಟ್ ಕಂಪನಿಯವರು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…