ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ ಅಂಶಗಳು.

ಬೆಳ್ಳಿಯಲ್ಲಿ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಗುಣವಿದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಬೆಳ್ಳಿಯ ಪಾತ್ರೆಗಳಿಗೆ ಇತರ ಲೋಹದ ಪಾತ್ರೆಗಳಿಗೆ ಅಂಟಿಕೊಂಡಷ್ಟು ಸುಲಭವಾಗಿ ಬ್ಯಾಕ್ಟೀರಿಯಾಗಳು ಅಂಟಿಕೊಳ್ಳುವುದಿಲ್ಲ. ಬೆಳ್ಳಿಯ ಪಾತ್ರೆಗಳನ್ನು ಸ್ಟೆರಿಲೈಸ್ ಮಾಡುವ ಅಗತ್ಯವಿಲ್ಲ.

ಹಾಗಾಗಿ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಸಿದರೆ ಬ್ಯಾಕ್ಟೀರಿಯಾ ಸೋಂಕಿನ ಭಯವಿಲ್ಲ. ಇನ್ನು, ಬೆಳ್ಳಿ ಪಾತ್ರೆಯಲ್ಲಿಟ್ಟ ಆಹಾರ ಹಾಗೂ ಪಾನೀಯಗಳು ಬೇಗ ಕೆಡುವುದಿಲ್ಲ. ಅವು ತಾಜಾ ಆಗಿರುತ್ತವೆ. ಇಂದು ನಾವು ಬಳಸುವ ಅನೇಕ ವಾಟರ್ ಪ್ಯೂರಿಫೈರ್ಗಳಲ್ಲಿ ಬೆಳ್ಳಿಯನ್ನು ಬಳಸಿರುತ್ತಾರೆ.

ಅದೇ ರೀತಿ, ಮಕ್ಕಳಿಗೆ ಬೆಳ್ಳಿಯ ಬಳೆ, ಕಡಗ, ಉಡದಾರಗಳನ್ನು ಹಾಕುವುದಕ್ಕೂ ಕಾರಣವಿದೆ. ಅವು ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತವೆ. ಈ ಎಲ್ಲ ಕಾರಣಗಳಿಂದ ಬೆಳ್ಳಿಯ ಪಾತ್ರೆ ಹಾಗೂ ಆಭರಣಗಳನ್ನು ಬಳಸುವ ಅಭ್ಯಾಸ ಬೆಳೆದುಬಂದಿದೆ.

ಅದು ಚಾಲ್ತಿಯಲ್ಲಿರಲಿ ಎಂಬ ಕಾರಣಕ್ಕೆ ಬೆಳ್ಳಿ ಪವಿತ್ರ ಲೋಹ ಎಂದು ಕರೆಯಲಾಗಿದೆ. ಬೆಳ್ಳಿ ಪಾತ್ರೆಯಲ್ಲಿ ಉಣ್ಣುವುದು ಹಾಗೂ ಬೆಳ್ಳಿಯನ್ನು ಧರಿಸುವುದು ಮಕ್ಕಳಗಿಷ್ಟೇ ಅಲ್ಲ, ದೊಡ್ಡವರಿಗೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…