ಸುದ್ದಿ

ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

40

ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ.

ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ ಮೊತ್ತದ ದಂಡ ಜಾರಿಯಾಗುತ್ತಿದ್ದಂತೆ ವಿರೋಧಗಳು ಕೇಳಿ ಬಂದಿತ್ತು. ಇದರಲ್ಲಿ ಪ್ರಮುಖವಾಗಿ ಹಾಳಾದ, ಗುಂಡಿ ಬಿದ್ದ ರಸ್ತೆ ಸರಿಮಾಡಿ ನಿಯಮ ಜಾರಿ ಮಾಡಿ ಅನ್ನೋ ಕೂಗು ಕೂಡ ಕೇಳಿ ಬಂದಿತ್ತು. ಇದೀಗ ಗೋವಾದಲ್ಲಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.

ಹೊಸ ಟ್ರಾಫಿಕ್ ನಿಯಮ ಜಾರಿ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಗೋವಾದಲ್ಲಿ ರಸ್ತೆಗಳು ಸಂಪೂರ್ಣ ರಿಪೇರಿ ಮಾಡಿದ ಬಳಿಕಷ್ಟೇ ನೂತನ ಟ್ರಾಫಿಕ್ ನಿಯಮ ಜಾರಿಯಾಗಲಿದೆ ಎಂದಿದ್ದಾರೆ. ಹಾಳಾದ, ಗುಂಡಿ ಬಿದ್ದ ರಸ್ತೆಗಳಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆ ಸರಿಯಿಲ್ಲದಿದ್ದರೆ, ಸವಾರರಿಂದ ದುಬಾರಿ ಮೊತ್ತ ಪಡೆಯುವುದು ಸಮಂಜಸವಲ್ಲ. ಹೀಗಾಗಿ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿಯಾಗಲಿದೆ ಎಂದು ಗೋವಾ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಪ್ರತಿಪಕ್ಷಗಳು ನೂತನ ಟ್ರಾಫಿಕ್ ನಿಯಮ ಜಾರಿಗೆ ವಿರೋಧ ವ್ಯಕ್ತಪಡಿಸಿತ್ತು. ಇಷ್ಟೇ ಅಲ್ಲ ರಸ್ತೆ ರಿಪೇರಿಗೆ ಆಗ್ರಹಿಸಿತ್ತು. ಇದೀಗ ಪ್ರತಿಪಕ್ಷಗಳ ಸಲಹೆ ಪಡೆದಿರುವ ಗೋವಾ ಸಿಎಂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.  

15 ರಿಂದ 20 ದಿನಗಳ ಒಳಗೆ ರಸ್ತೆ ರಿಪೇರಿ ಮಾಡುವಂತೆ PWD ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ಎಂಜೀನಿಯರ್‌ಗಳು ಖುದ್ದು ನಿಂತು ರಿಪೇರಿ ಮಾಡಿಸಲು ಸೂಚಿಸಿದ್ದಾರೆ. ಇನ್ನು ಡಿಸೆಂಬರ್‌ನಲ್ಲಿ ರಸ್ತೆ ರಿಪೇರಿ ಪರಾಮರ್ಶಿಸಿ ಹೊಸ ನಿಯಮ ಜಾರಿಗೊಳಿಸಲಾಗುವುದು ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ. ಗೋವಾ ಮುಖ್ಯಮಂತ್ರಿ ಆದೇಶದಿಂದ ಗೋವಾ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕನಿಷ್ಠ 3 ತಿಂಗಳ ಕಾಲ ಗೋವಾದಲ್ಲಿ ಹೊಸ ಟ್ರಾಫಿಕ್ ನಿಯಮ ಅನ್ವಯವಾಗೋದಿಲ್ಲ.  

ಗೋವಾ ಮುಖ್ಯಮಂತ್ರಿ ಆದೇಶದ ಬೆನ್ನಲ್ಲೇ ಕರ್ನಾಟಕದಲ್ಲೂ ಇದೇ ರೀತಿ ಅನುಸರಿಸಲು ಒತ್ತಾಯ ಕೇಳಿಬರುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ರಸ್ತೆಗಳು ಸರಿಪಡಿಸಿದ ಬಳಿಕವಷ್ಟೇ ಹೊಸ ನಿಯಮ ಜಾರಿ ಮಾಡಿ. ಸದ್ಯ ಜಾರಿಯಾಗಿರುವ ನೂತನ ನಿಯಮ ಹಿಂಪಡೆಯಿರಿ ಅನ್ನೋ ಕೂಗು ಕೇಳಿಬರುತ್ತಿದೆ.ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಗಳು ಆರಂಭವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು