ಸುದ್ದಿ

ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

28

ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ.

ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ಬಹುಪಾಲು ಜನರ ಕಣ್ಣಿಗೆ ಬಿದ್ದಿರಲಿಲ್ಲ. ಇತ್ತೀಚೆಗೆ ಈತ ಎಂಜಿನಿಯರ್‌ ಪದವಿ ಪೂರ್ತಿಗೊಳಿಸಿದ್ದಾರೆ. ಕ್ಯಾಂಪಸ್‌ ಇಂಟರ್‌ವ್ಯೂನಲ್ಲಿ ಪ್ರತಿಷ್ಠಿತ ಇಸ್ಫೋಸಿಸ್‌ ಸಂಸ್ಥೆಯಲ್ಲಿ ಉನ್ನತ ಹುದ್ದೆಯೊಂದಕ್ಕೆ ಆಯ್ಕೆಯಾಗಿದ್ದಾನೆ.

ಇದನ್ನು ತಿಳಿದ ಪ್ರಕೃತಿ ವಿದ್ಯಾಸಂಸ್ಥೆಯು, ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಿರುವ ಅಂಕಿತ್‌ನ ಸಾಧನೆಯನ್ನು ಗೌರವಿಸುವ ಕಾರ್ಯಕ್ರಮ ಏರ್ಪಡಿಸಿತ್ತು. ಎಲ್ಲ ಸವಲತ್ತುಗಳಿದ್ದು, ವಿದ್ಯಾಭ್ಯಾಸ ಮಾಡದ ವಿದ್ಯಾರ್ಥಿಗಳ ನಡುವೆ ಆತನ ಸಾಧನೆ ಗಮನ ಸೆಳೆದಿದ್ದು, ಅದು ಇತರರಿಗೂ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿತ್ತು.

ಸಾಧಕ ಅಂಕಿತ್‌ ಮಾತನಾಡಿ, ತಂದೆ ಎಲ್‌ಐಸಿ ಉದ್ಯೋಗಿ, ಸಹೋದರಿ ಐಬಿಎಂ ಉದ್ಯೋಗಿ. ಆರ್ಥಿಕವಾಗಿ ಬಡತನವಿರಲಿಲ್ಲ. ಆದರೂ ಸಮಯ ವ್ಯರ್ಥ ಮಾಡಬಾರದೆಂಬ ಕಾರಣಕ್ಕೆ ರಾತ್ರಿ ಪಾಳಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡಿದ್ದೇನೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಗ್ಯಾಜೆಟ್

    ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

    ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.