ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

176

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…