ಸುದ್ದಿ

ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

33

ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ.

ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ.

ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ ಒಳಪಡಿಸಲಾಯಿತು. ಇದು ಗಾಳಿಯಲ್ಲಿ ಕೆಲವು ನಿಮಿಷಗಳ ಕಾಲ ಹಾರಾಡುವಲ್ಲಿ ಸಫಲವಾಯಿತು. ಆಟೋರಿಕ್ಷಾದಷ್ಟು ಗಾತ್ರವಿರುವ ಈ ಕಾರು ನಾಲ್ಕು ಸಮನಾಂತರ ಪ್ರೊಪೆಲ್ಲರ್‍ಗಳನ್ನು ಹೊಂದಿವೆ. ಡ್ರೋಣ್ ರೀತಿಯ ಪ್ರೋಟೊಟೈಪ್ ಫ್ಲೈಯಿಂಗ್ ಕಾರನ್ನು ಜಪಾನ್ ರಾಜಧಾನಿ ಟೋಕಿಯೋದ ಚಿಬಾದಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು.

ಇದು 19 ಅಡಿಗಳಷ್ಟು ಎತ್ತರದಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿತು. ಈ ಫ್ಲೈಯಿಂಗ್ ಕಾರನ್ನು ಆರಂಭದಲ್ಲಿ ಮಾನವರಹಿತ ಸರಕು ಸಾಗಣೆಗಾಗಿ ಬಳಸಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಜಪಾನ್ ಸರ್ಕಾರ ಈ ಹಾರುವ ಕಾರುಗಳನ್ನು 2023ರ ವೇಳೆಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ. ಪ್ರಾರಂಭದಲ್ಲಿ ಇದನ್ನು ಸರಕುಗಳ ಸಾಗಣೆಗೆ ಬಳಸಲಾಗುತ್ತದೆ. ನಂತರ 2030ರಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಫ್ಲೈಯಿಂಗ್ ಕಾರುಗಳನ್ನು ವಿಸ್ತರಣೆ ಮಾಡಲಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…