ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ.
ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ.
ಇನ್ನೊಬ್ಬರ ಮೊಬೈಲ್ ಕೇಬಲ್ ಚಾರ್ಜರ್ ಪಡೆಯುವ ವೇಳೆ ಮಾಲ್ ವೇರ್ ಅಥವಾ ವೈರಸ್ ನಿಮ್ಮ ಮೊಬೈಲ್ಗೆ ಅಟ್ಯಾಕ್ ಆಗುವ ಸಾಧ್ಯತೆಯಿದ್ದು, ಇದರಿಂದ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲ ಡೇಟಾ, ಪಾಸ್ ವಾರ್ಡ್ ಹ್ಯಾಕರ್ ಗಳ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಕೆಲ ಚಾರ್ಜಿಂಗ್ ಕೇಬಲ್ ನಲ್ಲಿ ಸಣ್ಣ ಚಿಪ್ ಗಳನ್ನು ಅಳವಡಿಸಲಾಗುತ್ತದೆ. ಈ ಚಿಪ್ ಗಳು ಒಮ್ಮೆ ಮೊಬೈಲ್ ಚಾರ್ಜಿಂಗ್ ಪೋರ್ಟಲ್ ನಲ್ಲಿ ಹೋದರೆ, ರಿಮೋಟ್ ಕಂಟ್ರೊಲ್ ಮೂಲಕ ಡೇಟಾ ಪಡೆಯಬಹುದು ಎಂದು ಸಂಶೋಧನೆ ಹೇಳಿದೆ.
ಈ ಬಗ್ಗೆ ತಂಡದ ನೇತೃತ್ವ ವಹಿಸಿದ್ದ ಹೆಂಡರ್ಸನ್ ಮಾತನಾಡಿದ್ದು, ಚಿಕ್ಕ ಚಿಪ್ ಆಗಿರುವುದರಿಂದ ಯಾರಿಗೂ ತಿಳಿಯುವುದಿಲ್ಲ. ಈ ಮಾಲ್ವೇರ್ ಕೇವಲ ಕೇಬಲ್ ಪಡೆಯುವುದರಿಂದ ಮಾತ್ರವಲ್ಲದೇ, ಏರ್ಪೋರ್ಟ್ನಲ್ಲಿರುವ ಸಾರ್ವಜನಿಕ ಕೇಬಲ್, ಕಾಫಿ ಶಾಪ್ನಲ್ಲಿರುವ ಚಾರ್ಜಿಂಗ್ನಿಂದಲೂ ಬರಬಹುದು. ಆದ್ದರಿಂದ ನಿಮ್ಮ ಮೊಬೈಲ್ ಕೇಬಲ್ ಗಳನ್ನು ನೀವೇ ಪ್ರತ್ಯೇಕವಾಗಿಟ್ಟುಕೊಳ್ಳಿ. ಒಂದು ವೇಳೆ ಕೇಬಲ್ ಇಲ್ಲದಿದ್ದರೆ, ಹೊಸ ಕೇಬಲ್ ಪಡೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…