ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ ಶಾಲೆಯ ಮೂಲಕವೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಇದರ ಜತೆಗೆ ಆಧಾರ್ ನಕಲು ಪ್ರತಿ ನೀಡಬೇಕು.

ಎಸೆಸೆಲ್ಸಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಯ ಜತೆಗೆ ಶಾಲೆಯ ಮುಖ್ಯ ಶಿಕ್ಷಕರ ಮೊಬೈಲ್ ಸಂಖ್ಯೆ ಯನ್ನು ಕಡ್ಡಾಯವಾಗಿ ನಮೂದಿಸಲೇ ಬೇಕು. ಮಂಡಳಿಯಿಂದ ಶಾಲೆಗೆ ಬಂದಿರುವ ಅಂಕಪಟ್ಟಿಯನ್ನು ಅಭ್ಯರ್ಥಿಗಳಿಗೆ ವಿತರಣೆ ಮಾಡುವಾಗ ಅಭ್ಯರ್ಥಿಯ ವಿಳಾಸ, ನೋಂದಣಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆಯಾರಿಗೂ ಅಂಕಪಟ್ಟಿ ನೀಡಕೂಡದು ಎಂದು ಮಂಡಳಿಯಿಂದ ಎಚ್ಚರಿಕೆಯನ್ನು ನೀಡಲಾಗಿದೆ. ಎಸೆಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅದೇ ಶೈಕ್ಷಣಿಕ ವರ್ಷದಲ್ಲಿ ಅಂಕಪಟ್ಟಿ ವಿತರಣೆ ಮಾಡಲಾಗುತ್ತದೆ. ಆದರೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಥವಾ ಪೂರಕ ಪರೀಕ್ಷೆಯನ್ನು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಖಾಸಗಿ ಅಭ್ಯರ್ಥಿಗಳಿಗೆ, ಪುನರಾವರ್ತಿತ ಅಭ್ಯರ್ಥಿಗಳಿಗೆ ಅಂಕಪಟ್ಟಿ ವಿತರಣೆ ಸ್ವಲ್ಪ ವಿಳಂಬವಾಗುತ್ತದೆ.

ಏಕೆ ಈ ಕ್ರಮ? : ವಿದ್ಯಾರ್ಥಿ ವ್ಯಾಸಂಗ ಮಾಡಿದ ಶಾಲೆಯಿಂದಲೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಎರಡನೇ, ಮೂರನೇ ಅಥವಾ ನಾಲ್ಕನೇ ಅಂಕಪಟ್ಟಿಗೆ ಅಥವಾ ತಿದ್ದುಪಡಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಅರ್ಜಿಯನ್ನು ಸರಿಯಾಗಿ ಪರಿಶೀಲನೆ ಮಾಡದೆ, ಅಪೂರ್ಣ ಮಾಹಿತಿಯನ್ನು ಅರ್ಜಿಯನ್ನು ಮತ್ತು ಅಭ್ಯರ್ಥಿಗಳಿಗೆ ಅಂಕಪಟ್ಟಿ ನೀಡುವಾಗ ತಪ್ಪುಗಳಿರುವುದನ್ನು ಪರಿಶೀಲಿಸದೆ ನೀಡುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಶಾಲಾ ಮುಖ್ಯಶಿಕ್ಷಕರಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿ “ಉದಯವಾಣಿ’ಗೆ ಮಾಹಿತಿ ನೀಡಿದರು.

ಎಚ್ಚರ ವಹಿಸಿ! : ಇತ್ತೀಚಿನ ದಿನಗಳಲ್ಲಿ ಅಂಕಪಟ್ಟಿಯಲ್ಲಿ ಹಲವು ರೀತಿಯಲ್ಲಿ ಲೋಪವಾಗುತ್ತಿದೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅಂಕಪಟ್ಟಿ ವಿತರಣೆಗೆ ಮುನ್ನ ಸೂಕ್ಷ್ಮ ಪರಿಶೀಲನೆ ಮಾಡಬೇಕು ಎಂದಿದೆ ಪ್ರೌಢಶಿಕ್ಷಣ ಮಂಡಳಿ. ಅಂಕಪಟ್ಟಿಯಲ್ಲಿನ ಅಭ್ಯರ್ಥಿ, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿ ತಪ್ಪುಗಳಾಗಿದ್ದಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಾಗ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ವಿದ್ಯಾರ್ಥಿಯು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ನೀಡಿರುವ ದಾಖಲೆಗಳನ್ನೇ ಪ್ರೌಢಶಾಲೆಗೆ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಪ್ರಾಥಮಿಕ ಶಾಲೆಯಲ್ಲಿ ಒಂದು ರೀತಿಯ ದಾಖಲೆ ಹಾಗೂ ಪ್ರೌಢಶಾಲೆಗೆ ಇನ್ನೊಂದು ರೀತಿಯ ದಾಖಲೆ ನೀಡಿದರೆ ಅಂತಹ ಪ್ರಸ್ತಾವನೆಯನ್ನು ಮಂಡಳಿಗೆ ಸಲ್ಲಿಸುವ ಮೊದಲು ಎಲ್ಲ ನಿಯಮಗಳನ್ನು ಸರಿಯಾಗಿ ಅರಿತುಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಮಂಡಳಿ ಖಡಕ್ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.