ಸುದ್ದಿ

ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

26

ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….!

ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶ ಮೂಲದ ಇವರು ತಮ್ಮ ಐವರು ಸದಸ್ಯರ ತುಂಬು ಕುಟುಂಬದ ಜೀವನಾಧಾರಕ್ಕೆಂದು ಒಂದು ದಿನಸಿ ಅಂಗಡಿ ಇಟ್ಟುಕೊಂಡಿದ್ದಾರೆ. ಬೆಳಗ್ಗೆ 9 ರಿಂದ 11 ಮತ್ತು ಮಧ್ಯಾಹ್ನ 2 ರಿಂದ 4.30 ರವರೆಗೆ ಎರಡು ಪಾಳಿಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ಇವರ ಕಾರ್ಯವನ್ನು ಕಂಡ ನೆರೆಹೊರೆಯಲ್ಲಿ ವಾಸವಾಗಿರುವ ಇನ್ನೂ ಏಳು ಮಂದಿ ಶಿಕ್ಷಕರು ತಮ್ಮ ಬಿಡುವಿನ ವೇಳೆಯಲ್ಲಿ ಇವರ ಶಾಲೆಗೆ ಬಂದು ಪಾಠ ಹೇಳಿಕೊಡುತ್ತಿದ್ದಾರೆ.

ಇದೊಂದು ಓಪನ್ ಹೌಸ್ ಸ್ಕೂಲ್. ಇದಕ್ಕೆ ಸೂರು ಎಂದರೆ ಮೆಟ್ರೋ ಸೇತುವೆ. ಮೆಟ್ರೋ ಕಾಂಪ್ಲೆಕ್ಸ್ ನ ಗೋಡೆಗೆ ಕಪ್ಪು ಬಣ್ಣ ಬಳಿದು ಅದನ್ನೇ ಬೋರ್ಡ್ ಮಾಡಲಾಗಿದೆ, ಕಾರ್ಪೆಟ್ ಹಾಕಿ ಅದರ ಮೇಲೆ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ