ಸುದ್ದಿ

ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

95

ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳು ನೇರವಾಗಿ ಎಸ್‌ಎಸ್‌ಎಲ್‌ಸಿಯಲ್ಲಿ ಪಬ್ಲಿಕ್‌ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್‌ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್‌ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್‌ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್‌ ಮಾತ್ರೆ ನುಂಗಿಸಿದ ಸಚಿವ ಸುರೇಶ್‌ ಕುಮಾರ್‌ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸುದ್ದಿ

    ಶೀಘ್ರವೇ ಸುಮಲತಾ ಕುರಿತಂತೆ ವಿಡಿಯೋ ಸಿಡಿ ರಿಲೀಸ್ ಮಾಡುವುದಾಗಿ JDS ಶಾಸಕನಿಂದ ಹೊಸ ಬಾಂಬ್!ಆ ವಿಡಿಯೋದಲ್ಲಿ ಇರೋದು ಏನು?ಈ ಸುದ್ದಿ ನೋಡಿ…

    ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್​​ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…