ಸುದ್ದಿ

ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

31

ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ.

ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು ಈತ ಮೊದಲು ಚೆನ್ನಾಗಿಯೇ ಇದ್ದ. ಇತ್ತೀಚೆಗೆ ಪಬ್‌ಜಿ ಗೇಮ್‌ಗೆ ಅಡಿಕ್ಟ್ ಆಗಿ ಹೀಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದದಲ್ಲಿ ಹರಿಬಿಟ್ಟಿದ್ದಾರೆ. ಆದ್ರೆ ಇದು ಯಾವಾಗ ನಡೆದಿದ್ದು?, ಆತ ಯಾರು?ನಿಜವಾಗಿಯೂ ಪಬ್‌ಜಿಯಿಂದಲೇ ಹೀಗಾಗಿದೆಯಾ ಎಂಬುದರ ಬಗ್ಗೆ ಖಚಿತ ಮಾಹಿತಿ ಮಾತ್ರ ಯಾರಿಗೂ ಸಿಕ್ಕಿಲ್ಲ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಬ್‌ಜಿಯಿಂದಲೇ ಹೀಗಾಗಿದೆ ಎಂಬುದು ಅವರ ಮನೆಯವರಿಂದ ಗೊತ್ತಾಗಬೇಕಾಗಿದೆ, ಆತ ಯಾರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರೂ ಸಹ ಪಬ್‌ಜಿ ಗೇಮ್‌ಗೆ ದಾಸರಾಗಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಡಿ ವಿಶ್ವದಲ್ಲೇ ಬಹುತೇಕ ಯುವ ಪೀಳಿಗೆಯನ್ನು ತನ್ನ ದಾಸರನ್ನಾಗಿಸಿಕೊಂಡಿರುವ ಪಬ್‌ಜಿ ಗೇಮ್ ಅದೆಷ್ಟೋ ಜೀವಗಳನ್ನು ಹಾಗೂ ಕುಟುಂಬಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಸಮಯದಲ್ಲಿ ವಿಜಯಪುರದ ಕಂದಕದಲ್ಲಿ ಬಿದ್ದು ಹೊರಳಾಡಿದ ಯುವಕನ ವಿಡಿಯೋ ನೋಡಿದವರಿಗೆಲ್ಲ ಆತಂಕ ಶುರುವಾಗಿದೆ. ಹಾಗಾಗಿ ಈ ಗೇಮ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಗಳು ಜೋರಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….