ಸುದ್ದಿ

ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

29

ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ.

ಇತರೆ ಜಿಯೋ ಫೋನ್‌ಗಳು ಮತ್ತು ಲ್ಯಾಂಡ್‌ಲೈನ್‌ಗಳಲ್ಲಿ ಜಿಯೋ ಬಳಕೆದಾರರು ಮಾಡುವ ಕರೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಅಂತೆಯೇ, ವಾಟ್ಸ್​ಆ್ಯಪ್, ಫೇಸ್ ಟೈಮ್ ಮತ್ತು ಇತರ ಪ್ಲ್ಯಾಟ್‌ಫಾರ್ಮ್‌ಗಳ ಮೂಲಕ ಮಾಡಿದ ಕರೆಗಳಿಗೆ ಈ ಶುಲ್ಕ ವಿಧಿಸಲಾಗುವುದಿಲ್ಲ. ಹಾಗೆಯೇ ಇತರೆ ನೆಟ್‌ವರ್ಕ್‌ಗಳಿಂದ ಒಳಬರುವ ಕರೆಗಳು ಮೊದಲಿನಂತೆ ಉಚಿತವಾಗಿರಲಿದೆ ಎಂದು ತಿಳಿಸಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) 2017 ರ ಇಂಟರ್​ಕನೆಕ್ಟ್​ ಬಳಕೆ ಶುಲ್ಕವನ್ನು (ಐಯುಸಿ) ನಿಮಿಷಕ್ಕೆ 14 ಪೈಸೆಗಳಿಂದ 6 ಪೈಸೆಗಳಿಗೆ ಇಳಿಸಿತ್ತು. ಹಾಗೆಯೇ ಈ ಶುಲ್ಕವನ್ನು 2020 ರ ಜನವರಿಯ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿತ್ತು. ಆದರೆ ಈಗ TRAI ಈ ಗಡುವನ್ನು ವಿಸ್ತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

2015 ರಿಂದ ಜಿಯೋ ಉಚಿತ ಕರೆ ಸೌಲಭ್ಯವನ್ನು ಒದಗಿಸುತ್ತಿದೆ. ಇದರಿಂದ  ಕಳೆದ ಮೂರು ವರ್ಷಗಳಲ್ಲಿ ಇತರ ಮೊಬೈಲ್ ಆಪರೇಟರ್‌ಗಳಾದ ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾಗಳಿಗೆ ಐಯುಸಿ ಶುಲ್ಕವಾಗಿ ಜಿಯೋ ಟೆಲಿಕಾಂ ಸಂಸ್ಥೆ ಸುಮಾರು 13,500 ಕೋಟಿ ರೂಪಾಯಿಗಳನ್ನು ಪಾವತಿಸಿದೆ.ಈ ನಷ್ಟದ ಮೊತ್ತವನ್ನು ಸರಿದೂಗಿಸಲು ಅನ್ಯ ನೆಟ್​ವರ್ಕ್​ಗಳಿಗೆ ಮಾಡುವ ವಾಯ್ಸ್ ಕರೆಗಳಿಗೆ ದರ ವಿಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗೆ ವಿಧಿಸಲಾಗುವ ದರಕ್ಕೆ ಸಮನಾಗಿ ಡೇಟಾವನ್ನು ಜಿಯೋ ಉಚಿತವಾಗಿ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…