ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.
ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.
ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…