ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ.

ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಂಬಂಧ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ, ಶಿವಾಜಿನಗರ, ಬನಶಂಕರಿ, ಜಯನಗರ, ವಿಜಯನಗರ, ದೊಮ್ಮಲೂರು, ವೈಟ್ಫೀಲ್ಡ್, ಕೆಂಗೇರಿ ಸೇರಿದಂತೆ 15 ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರು ದಣಿವಾರಿಸಿಕೊಳ್ಳಲು ವಿರಾಮ ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇಲ್ಲಿ ಶುದ್ಧ ಕುಡಿಯುವ ನೀರು, ಫ್ಯಾನ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಸವಲತ್ತು ಕಲ್ಪಿಸಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ 10-15 ಆಸನಗಳನ್ನೂ ಅಳವಡಿಸಲು ನಿರ್ಧರಿಸಲಾಗಿದೆ. ಇದರಿಂದ ಮಹಿಳೆಯರು ಬಸ್ಗಾಗಿ ಕಾದು ನಿಲ್ಲುವುದು ತಪ್ಪಲಿದೆ.

ಬಿಎಂಟಿಸಿಗೆ 33.64 ಕೋಟಿ ರೂಪಾಯಿ ಅನುದಾನ ಬಂದಿದೆ.ಅದರಲ್ಲಿ 2.37 ಕೋಟಿ ರೂಪಾಯಿ ಖರ್ಚಾಗಿದೆ. ಉಳಿದ 31.27 ಕೋಟಿ ರೂಪಾಯಿ ಅನುದಾನವನ್ನು ಬಳಸಿಕೊಂಡು ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲಾಗುವುದು. ಬಿಎಂಟಿಸಿ 14 ಪ್ರಮುಖ ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ನಿರ್ಮಾಣ ಮಾಡಲಿದ್ದು, ಕುಡಿಯುವ ನೀರು, ಫೀಡಿಂಗ್ ಕೊಠಡಿ, ಮೊಬೈಲ್ ಚಾರ್ಜಿಂಗ್ ವ್ಯವಸ್ಥೆ, ಶೌಚಗೃಹ, ವೈಫೈ ಸೌಲಭ್ಯ ಮಾಹಿತಿ ಪ್ರದರ್ಶನ ಮೊದಲಾದ ವ್ಯವಸ್ಥೆ ಕಲ್ಪಿಸಲಾಗುತ್ತದೆ.1000 ಬಸ್ ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…