ದೇಗುಲ ದರ್ಶನ

ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

45

ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.

12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.

 ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. 

ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು.  ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ