ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ.

ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಹಕ್ಕಿಯಂತೆ ಗರಿ ಬಿಚ್ಚಿ ಹಾರಿದಂತೆ ಕೈಗಳನ್ನು ಮೇಲೆ ಮಾಡಿ ಖುಷಿಯಿಂದ ಶಿಖರದ ತುದಿಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಜೊತೆಗೆ, ಕೃತಕ ಕಾಲುಗಳಿಗೆ ಸರ್ಕಾರ ವಿಧಿಸಲು ಉದ್ದೇಶಿಸಿರುವ ತೆರಿಗೆಯನ್ನೂ ವಿರೋಧಿಸಿದ್ದಾರೆ. ನಾವು ವಿಶೇಷ ಚೇತನರು ಪ್ಲಾಸ್ಟಿಕ್ ಕಾಲುಗಳು ಇಲ್ಲದಿದ್ದರೂ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳುತ್ತೇವೆ ಎಂಬುದನ್ನು ಸಾಬೀತು ಮಾಡಿ ಸರ್ಕಾರದ ಕಣ್ಣು ತೆರೆಸಲು ನೀರಜ್ ಈ ಎಲ್ಲಾ ನೋವುಗಳನ್ನು ನುಂಗಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನು, ನೀರಜ್ ಸಾಧನೆಗೆ ಕುಟುಂಬಸ್ಥರೂ ಬೆಂಬಲವಾಗಿ ನಿಂತಿದ್ದಾರೆ. ನೀರಜ್ ಈ ಪರ್ವತದ ಮೇಲೆ ಹೋಗಿ ವಿಡಿಯೋ ಕರೆ ಮಾಡಿದ ನಂತರ ಇವರ ಖುಷಿಗೆ ಪಾರವೇ ಇಲ್ಲ. ಏಳನೇ ದಿನ ನೀರಜ್ ಮನೆಯವರಿಗೆ ಕರೆ ಮಾಡಿ ತಮ್ಮ ಸಾಧನೆಯ ವಿಷಯ ತಿಳಿಸಿದ್ದರು. ಅಲ್ಲಿ ತನಕ ಮನೆಯವರೂ ಆತಂಕದಿಂದ ಶುಭ ಸುದ್ದಿಗಾಗಿ ಕಾಯುತ್ತಲೇ ಇದ್ದರು.

ಚಿಕ್ಕಂದಿನಲ್ಲಿ ಚೆನ್ನಾಗಿಯೇ ಇದ್ದ ನೀರಜ್ ಅವರಿಗೆ 1996ರಲ್ಲಿ ಆರೋಗ್ಯದ ಸಮಸ್ಯೆ ಎದುರಾಗಿತ್ತು. ಈ ವೇಳೆ, ಇವರ ಕಾಲನ್ನು ಶಸ್ತ್ರಚಿಕಿತ್ಸೆಮೂಲಕ ತೆಗೆಯಲಾಗಿತ್ತು.ಇದಾದ ಬಳಿಕ ಮನೆಯವರು ನೀರಜ್ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರು.ಆದರೆ, ಈ ಚಿಂತೆಯನ್ನು ಈಗ ನೀರಜ್ ದೂರ ಮಾಡಿದ್ದಾರೆ ಮತ್ತು ಅದ್ಭುತವೊಂದನ್ನು ಸಾಧಿಸಿ ತೋರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….