ಸುದ್ದಿ

ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

34

ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು.

ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ ಧರಿಸಿಕೊಂಡು ಬಂದೆ ಎಂದು ಪವಿತ್ರಾ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಕಾಲೇಜು ವಿದ್ಯಾರ್ಥಿನಿ ಸುಮತಿ ಮನೆಗೆ ವಾಪಸ್ಸಾಗಿ ಬೇರೆ ಬಟ್ಟೆ ಧರಿಸಿ ಆರ್‌ಟಿಓ ಕಚೇರಿಗೆ ಬಂದಿದ್ದರು. ಅಂದು ಸುಮತಿ ಬರ್ಮುಡಾ ಹಾಗೂ ಶರ್ಟ್ ಧರಿಸಿದ್ದರು. ಹೀಗಾಗಿ ಮತ್ತೆ ಮನೆಗೆ ತೆರಳಿ ನಿಯತ್ತಾದ ಡ್ರೆಸ್ ಧರಿಸಿ ಬಂದಿದ್ದರು. ಇದಕ್ಕೂ ಮೊದಲು ಡ್ರೆಸ್ ಕುರಿತಂತೆ ಸುಮತಿ ಹಾಗೂ ಇನ್ಸ್ ಪೆಕ್ಟರ್ ಮಧ್ಯೆ ವಾಗ್ವಾದ ನಡೆದಿತ್ತು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆಯೇ ಇನ್ಸ್ ಸ್ಪೆಕ್ಟರ್ ಸಹೋದ್ಯೋಗಿಗಳು ಸ್ಥಳದಲ್ಲಿ ಜಮಾಯಿಸಿ ಸಮಜಾಯಿಷಿ ನೀಡಿದ್ದಾರೆ.

ಲೈಸೆನ್ಸ್ ಸಿಗುವ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ಮತ್ತೆ ಮನೆಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಬಂದೆ ಎಂದು ಸುಮತಿ ತಿಳಿಸಿದ್ದಾರೆ.ಈ ಬಗ್ಗೆ ವಕೀಲ ವಿ. ಎಸ್ ಸುರೇಶ್ ಮಾತನಾಡಿ, ಡ್ರೈವಿಂಗ್ ಟೆಸ್ಟ್ ಗೆ ಇಂತದ್ದೇ ಡ್ರೆಸ್ ಹಾಕಿಕೊಂಡು ಬರಬೇಕೆಂಬ ನಿಯಮ ಕಾನೂನಿನಲ್ಲಿ ಇಲ್ಲ. ಆದರೆ ಲೈಸೆನ್ಸ್ ಸಿಗಬೇಕಾದರೆ ವ್ಯಕ್ತಿಗೆ 18 ವರ್ಷ ಆಗಿರಬೇಕು ಅಷ್ಟೇ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…