ಆಧ್ಯಾತ್ಮ, ಉಪಯುಕ್ತ ಮಾಹಿತಿ

ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

887

ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು.

ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆಗಳಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನವೆಂಬ ದೊಡ್ಡ ದೇವಸ್ಥಾನವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. 1799 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರಧ್ದಾ ಭಕ್ತಿಯಿಂದ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. ಹಾಗೂ ಹೆಚ್ಚಿನ ಮಹತ್ವ ತಂದಿದ್ದಾರೆ.

ಚಾಮುಂಡಿಬೆಟ್ಟ ಚಾರಿತ್ರಿಕ ಹಿನ್ನಲೆಯಲ್ಲಿ ಹೊಯ್ಸಳ, ವಿಜಯನಗರ ಹಾಗೂ ಮೈಸೂರು ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನಲೆಯನ್ನು ಗುರುತಿಸಲಾಗಿದೆ. ಕ್ರಿ.ಶ. 1573 ರಲ್ಲಿ ಚಾಮರಾಜ ಒಡೆಯರು ದೇವಿಯನ್ನು ಪೂಜಿಸಲು ಹೋಗುತ್ತಿದ್ದಾಗ ಅವರಿಗೆ ಸಿಡಿಲು ಬಡಿದು ಅವರ ತಲೆಯ ಕೂದಲೆಲ್ಲಾ ಉದುರಿ ಹೋದವೆಂದು ಇತಿಹಾಸ ಹೇಳುತ್ತದೆ.

ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿರುವ ದೇವಸ್ಥಾನ, ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಮಹಾದ್ವಾರದ ಮೇಲೆ ಸುಂದರವಾದ ಗೋಪುರ ಮತ್ತು ಗರ್ಭಗುಡಿಯ ಮೇಲೆ ‘ವಿಮಾನ’ ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿ ನಿರ್ಮಿತವಾಗಿದೆ. ಶಿಖರದ ಮೇಲೆ ಏಳು ಚಿನ್ನದ ಲೇಪಿತ ಕಲಶಗಳಿವೆ.

ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು. ‘ಸಿಂಹವಾಹನ’ ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂಧರ್ಭದಲ್ಲಿ ಬಳಸಲಾಗುತ್ತಿದ್ದು ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ದ್ವಾರದ ಮೇಲ್ಭಾಗದಲ್ಲಿ ಸಣ್ಣದೊಂದು ಗಣಪತಿಯ ವಿಗ್ರಹವನ್ನು ನೋಡಬಹುದು. ದ್ವಾರದ ಬೃಹತ್ ಮರದ ಬಾಗಿಲನ್ನು ಬೆಳ್ಳಿಯ ತಗಡಿನಿಂದ ಹೊದಿಸಲಾಗಿದ್ದು, ಬೆಳ್ಳಿಯ ಬಾಗಿಲಿನ ಮೇಲೆ ದೇವಿಯ ಹಲವು ಸ್ವರೂಪಗಳನ್ನು ತೋರಲಾಗಿದೆ. ಮಹಾದ್ವಾರದ ಕೆಳ ಪಾರ್ಶ್ವದಲ್ಲಿ ಇಂದ್ರಾದಿ ಅಷ್ಠದಿಕ್ಪಾಲಕರ ವಿಗ್ರಹಗಳಿವೆ.

ಮಹಾದ್ವಾರದಿಂದ ಒಳಗೆ ಹೋದರೆ ಬಲಭಾಗದಲ್ಲಿ ದಕ್ಷಿಣಾಭಿಮುಖವಾಗಿ ಗಣಪತಿಯ ಸಣ್ಣ ವಿಗ್ರಹವು ಸ್ಥಾಪಿಸಲ್ಪಟ್ಟಿದೆ. ವಿಘ್ನರಾಜನಿಗೆ ನಮಿಸಿ ಕೆಲವು ಕಲ್ಲಿನ ಮೆಟ್ಟಿಲುಗಳನ್ನು ಹತ್ತಿ ಹೋದರೆ ದೇವಸ್ಥಾನದ ಬಲಿಪೀಠ ಮತ್ತು ಧ್ವಜ ಸ್ಥಂಭ ಕಂಡುಬರುತ್ತದೆ. ಬಲಿಪೀಠದ ಮೇಲೆ ದೇವಿಯ ಪಾದಗಳನ್ನು ರೂಪಿಸಲಾಗಿದೆ. ಇವೆರಡರ ಮುಂಭಾಗದಲ್ಲಿ ಗರ್ಭಗುಡಿಗೆ ಅಭಿಮುಖವಾಗಿ ಸಣ್ಣದೊಂದು ನಂದಿ ವಿಗ್ರಹವಿದೆ. ಮಾತೆ ಚಾಮುಂಡಿಯನ್ನು ಅದು ವೀಕ್ಷಿಸುತ್ತಾ ಕುಳಿತಿದೆ. ಧ್ವಜ ಸ್ಥಂಭಕ್ಕೆ ಈಶಾನ್ಯದಲ್ಲಿ ಗೋಡೆಯ ಮೇಲೆ ಆಂಜನೇಯನ ವಿಗ್ರಹವಿದ್ದು ಅದಕ್ಕೂ ನಿತ್ಯ ಪೂಜೆ ಜರುಗುತ್ತದೆ. ಇಲ್ಲಿನ ಪ್ರವೇಶ ದ್ವಾರದಲ್ಲಿ ನಂದಿನಿ ಮತ್ತು ಕಮಲಿನಿ ಎಂಬ ದ್ವಾರಪಾಲಿಕೆಯರ ವಿಗ್ರಹಗಳು ದ್ವಾರದ ಎಡ ಮತ್ತು ಬಲ ಭಾಗದಲ್ಲಿವೆ.

ಗರ್ಭಗುಡಿಗೆ ಮುಂಚೆ ಇರುವ ಅತರಾಳದ ಎಡಭಾಗದಲ್ಲಿ ಮುದ್ದಾದ ಗಣಪತಿ ವಿಗ್ರಹ ಮತ್ತು ಬಲಭಾಗದಲ್ಲಿ ಭೈರವ ದೇವರ ವಿಗ್ರಹಗಳಿವೆ. ಭೈರವ ದೇವರ ಎಡಭಾಗದಲ್ಲಿ ಚಾಮುಂಡಿಯ ಪಂಚಲೋಹದ ಸುಂದರ ಉತ್ಸವ ಮೂರ್ತಿಯಿದೆ. ಗಣಪತಿಯ ಬಲಭಾಗದಲ್ಲಿ ಭಕ್ತನ ದಿರಿಸು ತೊಟ್ಟಿರುವ ಮುಮ್ಮಡಿ ಕೃಷ್ಣರಾಜ ಒಡೆಯರ ಆರು ಅಡಿ ಎತ್ತರದ ಸುಂದರ ಭಕ್ತ ವಿಗ್ರಹ ಕಾಣಬರುತ್ತದೆ. ಮಹಾರಾಜರು ತಮ್ಮ ಮೂವರು ಪತ್ನಿಯರೊಂದಿಗೆ ದೇವಿಗೆ ಕೈಮುಗಿದು ನಿಂತಿದ್ದಾರೆ. ಮಹಾರಾಜರ ಎಡಭಾಗಗಳಲ್ಲಿ ನಿಂತಿರುವವರೆಂದರೆ ರಮಾವಿಲಾಸ, ಲಕ್ಷ್ಮಿವಿಲಾಸ ಮತ್ತು ಕೃಷ್ಣವಿಲಾಸ ಮಹಾರಾಣಿಯರು. ಇವರುಗಳ ಶಿಲಾ ವಿಗ್ರಹಗಳ ಪಾದದ ಬಳಿಯ ಪೀಠದ ಮೇಲೆ ಇವರುಗಳ ಹೆಸರುಗಳನ್ನು ಕೆತ್ತಲಾಗಿದೆ.

ದೇವಾಲಯದ ಅರ್ಚಕರು ತಾಯಿ ಸ್ವರೂಪದ ಶಿಲಾ ಪ್ರತಿಮೆಯನ್ನು ಪ್ರತಿ ದಿನ ಅಲಂಕರಿಸಿ ಪೂಜೆ ಮಾಡುತ್ತಾರೆ. ಯದುಕುಲದ ದೇವತೆಯಾಗಿ ಬೆಳೆದು ಬಂದಿರುವ ಶ್ರೀ ಚಾಮುಂಡೇಶ್ವರಿಗೆ ಮೈಸೂರಿನ ಮಹಾರಾಜರುಗಳು ಹಲವಾರು ಬೆಲೆಬಾಳುವ ಹಾಗೂ ಅಪರೂಪವಾದ ಕಾಣಿಕೆಗಳನ್ನು ಶ್ರಧ್ಧಾಭಕ್ತಿಯಿಂದ ಒಪ್ಪಿಸಿದ್ದಾರೆ. ಈ ಶಕ್ತಿ ದೇವತೆಗೆ ಮಾನವ ಮತ್ತು ಪ್ರಾಣಿ ಬಲಿಯನ್ನು ಹಿಂದೆ ಕೊಡಲಾಗುತ್ತಿತ್ತು. ಆದರೆ 18ನೇ ಶತಮಾನದಲ್ಲಿ ಅದಕ್ಕೆ ಕಡಿವಾಣ ಬಿತ್ತು. ಈಗೇನಿದ್ದರೂ ಫಲಪುಷ್ಪಗಳ ಅರ್ಚನೆ, ಹಣ್ಣು ಹೂವು ಸಮರ್ಪಣೆ ಮಾತ್ರ ಮಾಡಲಾಗುತ್ತದೆ.

ಗರ್ಭಗುಡಿಯ ಮೇಲ್ಭಾಗದಲ್ಲಿ ಇನ್ನೊಂದು ಸಣ್ಣ ಗೋಪುರ ಕಂಡು ಬರುತ್ತದೆ. ದೇವಾಲಯದ ಹೊರಗಿನಿಂದ ‘ವಿಮಾನವನ್ನು’ ಕಾಣಬಹುದು. ಒಳ ಪಾರ್ಶ್ವದಲ್ಲಿರುವ ಪ್ರಾಕಾರದಲ್ಲಿ ಹಲವು ಸಣ್ಣ ಮೂರ್ತಿಗಳಿದ್ದು ಅಲ್ಲಿಯೂ ಪೂಜೆ ಪುನಸ್ಕಾರಗಳು ಜರುಗುತ್ತವೆ. ಪ್ರಾಕಾರದಲ್ಲಿ ಪ್ರದಕ್ಷಿಣೆ ಮುಗಿಸಿ ದೇವಸ್ಥಾನದಿಂದ ಹೊರಹೋಗುವಾಗ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನವನ್ನು ಮಾಡಬಹುದಾಗಿದೆ ರಾಘವೇಂದ್ರಆಚಾರ್ಯ

9901077772, ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು, ೧) ಮದುವೆ, ೨) ಸಂತಾನ ಕೊರತೆ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ, ೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ,೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…