ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.

ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್ ಸೇಲ್ ದರದಲ್ಲಿ ವಿತರಣಾ ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಒಂದು ತಂಡ ನೆರೆ ಪೀಡಿತ ಜಿಲ್ಲೆಗೆ ತಲುಪಿದ್ದಾರೆ. ಮೊದಲಿಗೆ ಹಾವೇರಿಯ ಕೂಡಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ಸೋಮುವಾರ ಬೆಳಗಾವಿ ಜಿಲ್ಲೆಯಲ್ಲಿ ವಿತರಣೆ ಮಾಡುತ್ತೇವೆ ಎಂದು ಆಯೋಜಕರು ಮಾಹಿತಿನೀಡಿದ್ದಾರೆ.

ಒಂದು ವಿದ್ಯಾರ್ಥಿಗೆ ಒಂದು ಬ್ಯಾಗ್, ನೀರಿನಬಾಟೆಲ್ ಮತ್ತು ಜಾಮೆಟ್ರಿ ಬಾಕ್ಸ್ ಎಂಟು ನೂರು ರೂಪಾಯಿಯಂತೆ ಒಟ್ಟು ಮುನ್ನೂರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪ್ರೈಂ ಕ್ಲಬ್ ಮತ್ತು ಗೆಳೆಯರ ಸಂಯುಕ್ತ ಆಶ್ರಯದಲ್ಲಿ ಮಾಡುತ್ತಿರುವ ಕೆಲಸಕ್ಕೆ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ಕೂಡ ಸಂತಸ ವ್ಯಕ್ತಪಡಿಸಿದ್ದು, ಯುವಕರ ತಂಡದ ಸಮಾಜ ಸೇವೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವಪ್ಪ, ಪ್ರೈಂ ಕ್ಲಬ್ ಸದಸ್ಯರಾದ ಅಶೋಕ್ ಗೌಡ, ಜಾಯ್ಬ್ರಿಗಾಂಝ, ಮೋಹನ್ ಮತ್ತು ಮಹಮದ್ಶಫಿ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.