ಸುದ್ದಿ

ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

67

ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ.

ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹಂತ 3, 4, ಹಾಗೂ 5ರಲ್ಲಿ ಬರುವ ಉದ್ಯೋಗಿಗಳ ಪೈಕಿ ಶೇ. 2-5ರಷ್ಟು ನೌಕರರೂ ಕೂಡಾ ಕೆಲಸ ಕಳೆದುಕೊಳ್ಳಲಿದ್ದಾರೆ. ಇನ್ಫೋಸಿಸ್ನಲ್ಲಿ ಸದ್ಯ ಮಧ್ಯಮ ಕ್ರಮಾಂಕದಲ್ಲಿ ಸರಿಸುಮಾರು 1 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ.2 ರಿಂದ 5ರಷ್ಟು ಮಂದಿಯನ್ನು ಸಂಸ್ಥೆ ಕೆಲಸದಿಂದ ಕಿತ್ತುಹಾಕಲು ಹೊರಟರೆ, ಸುಮಾರು 4 ರಿಂದ10 ಸಾವಿರ ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ.

ಅಷ್ಟೇ ಅಲ್ಲ, ಹಿರಿಯ ಕಾರ್ಯನಿರ್ವಾಹಕ ಹುದ್ದೆಯಡಿ ಬರುವ ಸಹಾಯಕ ಉಪಾಧ್ಯಕ್ಷರು,ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಿಗೂ ಕೆಲಸ ಬಿಡುವಂತೆ ಇನ್ಫೋಸಿಸ್ ಹೇಳಿದೆ. ಅಂದರೆ ಈ ಹಂತದ ಒಟ್ಟು 50 ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ. ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಇನ್ಫೋಸಿಸ್ ಇದೊಂದು ಆಂತರಿಕ ಪ್ರಕ್ರಿಯೆ ಎಂದು ಹೇಳಿದೆ. ಸಾಮೂಹಿಕವಾಗಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂದು ಪರಿಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟನೆ ನೀಡಿರುವ ಇನ್ಫೋಸಿಸ್, ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿರೋದಾಗಿ ಹೇಳಿದೆ.

ಹಾಗೆ ನೋಡಿದ್ರೆ, ಕಳೆದ ಕೆಲವು ವರ್ಷಗಳಿಂದ ಇನ್ಫೋಸಿಸ್‌ನಲ್ಲಿ ಸಾಮೂಹಿಕ ಉದ್ಯೋಗ ಕಡಿತ ಆಗಿರಲಿಲ್ಲ. ಕೇವಲ ಕಾರ್ಯಕ್ಷಮತೆ ಆಧಾರದ ಮೇಲಷ್ಟೇ ಉದ್ಯೋಗ ಕಡಿತ ಮಾಡಲಾಗುತ್ತಿತ್ತು. ಆದ್ರೆ ಇದೀಗ ನಡೆಯುತ್ತಿರುವ ಉದ್ಯೋಗ ಕಡಿತ ಬೇರೆಯದೇ ರೀತಿಯಲ್ಲಿ ಕಂಡು ಬರ್ತಿದೆ. ಹಾಗೆ ನೋಡಿದ್ರೆ, ಐಟಿ ಉದ್ಯಮದಲ್ಲಿ ಇತ್ತೀಚೆಗೆ ಉದ್ಯೋಗ ಕಡಿತ ಸಹಜವಾಗ್ತಿದೆ.ಸಂಸ್ಥೆಗಳು ಬಹುಮುಖ ಪ್ರತಿಭೆಯುಳ್ಳ ನೌಕರರ ಹುಡುಕಾಟ ನಡೆಸುತ್ತಿದೆ. ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದಕತೆ ನೀಡುವ ಉದ್ದೇಶವನ್ನು ಹೊಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…