ಸುದ್ದಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

33

ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ ಪೂರ್ಣಗೊಳಿಸಲು  25 ಸಾವಿರಕೋಟಿ ರೂ.ಗಳ  ನಿಧಿಯನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು. ಈ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್) ಸರ್ಕಾರ 10,000 ಕೋಟಿ ರೂ., ಎಸ್‌ಬಿಐ ಮತ್ತು ಎಲ್‌ಐಸಿ 15,000 ಕೋಟಿ ರೂ. ನೀಡಲಿದೆ.ಇದು ದೇಶಾದ್ಯಂತ 4.58 ಲಕ್ಷ ವಸತಿ ಘಟಕಗಳನ್ನು ಒಳಗೊಂಡ 1,600 ಸ್ಥಗಿತಗೊಂಡ ವಸತಿ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ

ಈ ಉಪಕ್ರಮದಿಂದ ಉದ್ಯೋಗ ಸೃಷ್ಟಿಯಾಗುವುದು. ಜೊತೆಗೆ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಪುನರುಜ್ಜೀವನ ಆಗಲಿದೆ.ಇದು ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿನ ಒತ್ತಡವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಯೋಜನೆಯು ಸಾರ್ವಭೌಮ ಮತ್ತು ಪಿಂಚಣಿ ನಿಧಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ನಿಧಿಯ ಗಾತ್ರ ಹೆಚ್ಚಾಗುತ್ತದೆ. ಸರ್ಕಾರ ಪ್ರಾಯೋಜಕರಾಗಿ ಕಾರ್ಯನಿರ್ವಹಿಸುತ್ತದೆ ಮತ್ತು 10,000 ಕೋಟಿ  ರೂ.ನಿಧಿಯನ್ನು ಪರಿಹಾರವಾಗಿ ನೀಡುತ್ತದೆ.

ಇದು ವಸತಿ ಕಟ್ಟಡ ಅಭಿವೃದ್ಧಿದಾರರಿಗೆ(ಡೆವಲಪರ್‌ಗಳಿಗೆ ) ಅನುಕೂಲ ಕಲ್ಪಿಸಲಿದ್ದು ಮನೆ  ಖರೀದಿದಾರರಿಗೆ ಮನೆಗಳ ವಿತರಣೆಯನ್ನು ಖಚಿತ ಪಡಿಸುತ್ತದೆ. “ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಹೂಡಿಕೆ ಮಾಡಿದಹೆಚ್ಚಿನ ಸಂಖ್ಯೆಯ ಮಧ್ಯಮ ವರ್ಗದ ಗೃಹ ಬಳಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ನಿವಾರಿಸಲು ಇದರಿಂದ ಸಹಾಯವಾಗಲಿದೆ. ಜತೆಗೆ ಆರ್ಥಿಕತೆಯಲ್ಲಿ ಉತ್ಪಾದಕ ಬಳಕೆಗಾಗಿವ ದೊಡ್ಡ ಪ್ರಮಾಣದ ಹಣವನ್ನು ಸಹ ಬಿಡುಗಡೆಯಾಗಲಿದೆ” ಸಚಿವರು ಮಾಹಿತಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…