ಸುದ್ದಿ

ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

58

ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಣ್‍ಬೀರ್ ಹಾಗೂ ಅಲಿಯಾ ನವೆಂಬರ್‌ನಲ್ಲಿ  ಫ್ರಾನ್ಸ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್‍ಸೈಟ್‍ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್‍ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್‌ನ  ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್‌ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…