ಸುದ್ದಿ

ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

32

ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್‌ಸೆಟ್‌ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….