ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಲತಾ ಮಂಗೇಶ್ವರ್ ಅವರು ಧ್ವನಿ ನೀಡಿದ್ದು, ಭಾರತದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿಯನ್ನು 2001 ರಲ್ಲಿ ಪಡೆದಿದ್ದಾರೆ. ಒಟ್ಟಾರೆ ವಿವಿಧ ಭಾಷೆಯಲ್ಲಿ ಲತಾ ಮಂಗೇಶ್ಕರ್ ಅವರು 36 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರಿಗೆ 3 ರಾಷ್ಟ್ರೀಯ ಪ್ರಶಸ್ತಿ, 6 ಫಿಲ್ಮಫೇರ್ ಪ್ರಶಸ್ತಿ, ಪದ್ಮವಿಭೂಷಣ್, ಪದ್ಮಭೂಷಣ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಭಿಸಿದೆ.

ನ್ಯುಮೋನಿಯಾದಿಂದ ಬಳಲುತ್ತಿರುವ ಅವರ ಸ್ಥಿತಿ ಗಂಭೀರವಾಗಿಯೇ ಇದೆ. ಕಳೆದ ಕೆಲವಾರು ಗಂಟೆಗಳಲ್ಲಿ ಉಸಿರಾಟ ಹಾಗೂ ಹೃದಯದ ಕೆಲಸದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಕೃತಕ ಉಸಿರಾಟ ವ್ಯವಸ್ಥೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಇಂಟರ್ನಲ್ ಮೆಡಿಸಿನ್ ವಿಭಾಗದ ವೈದ್ಯ ಡಾ. ಪ್ರತೀತ್ ಸಂದಾನಿ ಹೇಳಿದ್ದಾರೆ.

ಎಡ ಭಾಗದ ಹೃದಯ ಅಗತ್ಯ ಪ್ರಮಾಣದಲ್ಲಿ ರಕ್ತವನ್ನು ಪಂಪ್ ಮಾಡುತ್ತಿಲ್ಲ. ಇದೊಂದು ವಿಧವಾದ ಹೃದಯ ವೈಫಲ್ಯ ಎನ್ನುತ್ತೇವೆ. ದೇಹಕ್ಕೆ ಶುದ್ಧ ರಕ್ತವನ್ನು ತಲುಪಿಸುವಲ್ಲಿ ಎಡ ಭಾಗದ ಹೃದಯ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ಸದ್ಯ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿಯಲ್ಲಿ ಹೃದಯ ಹೆಚ್ಚಿನ ಸಾಮರ್ಥ್ಯ ಹಾಕಿ, ಸ್ವಲ್ಪ ಪ್ರಮಾಣದ ರಕ್ತವನ್ನಷ್ಟೇ ಹೃದಯದಿಂದ ಹೊರ ಕಳಿಸುತ್ತಿದೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ. ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…