ಸುದ್ದಿ

ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

39

ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು ಮಾಡಬೇಕಾಗುತ್ತದೆ. ಅಸ್ಸಾಂ ಪೊಲೀಸರು ದಾರಂಗಿ ಜಿಲ್ಲೆಯಲ್ಲಿ ಈ ಮಕ್ಕಳ ತಾಯಂದಿರು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಹೋಗಿದ್ದರು. ಈ ವೇಳೆ ಅವರವರ ಮಕ್ಕಳನ್ನು ಇಬ್ಬರು ಪೇದೆಗಳು ನೋಡಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ನವೆಂಬರ್ 10ರಂದು ಅಸ್ಸಾಂನಲ್ಲಿ ಈ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಶಿಕ್ಷಕರು ಮೊದಲನೇ ತರಗತಿಯಿಂದ 8 ನೇತರಗತಿವರೆಗೂ ಕಲಿಸಲು ಅರ್ಹರಾಗುತ್ತಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಹಲವು ಮಂದಿ ಪೇದೆಗಳನ್ನು ಹೊಗಳಿದ್ದಾರೆ. ಕೆಲವರು ‘ಸೆಲ್ಯೂಟ್’ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೆ ಕೆಲವರು ‘ಸೆಲ್ಯೂಟ್ಮ್ಯಾಮ್. ನೀವು ಸೂಪರ್ ಮೇಡಂ’ ಎಂದು ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…