ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ.

ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು.

ಈ ಮಾರ್ಗಸೂಚಿಗಳನ್ನು ಇಲಾಖೆಯ ತಜ್ಞರ ಸಮಿತಿಯಲ್ಲಿಟ್ಟು ಪರಿಶೀಲಿಸಿ, ನಂತರ ಇಲಾಖೆಯ ಆಯುಕ್ತರ ಅನುಮೋದನೆ ಪಡೆದು ಸುತ್ತೋಲೆ ಹೊರಡಿಸಬೇಕಿತ್ತು. ಆದರೆ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ ಕೆ.ಎಸ್.ಮಣಿ ಅವರು, ಖಾಸಗಿ ಸಂಸ್ಥೆಯ ಮಾರ್ಗದರ್ಶಿಗಳನ್ನು 2019ರ ಅ.28ರಂದು ಯಥಾವತ್ ಅನುಮೋದನೆ ನೀಡಿ, ನ.6ರಂದು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದರು.

‘ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ಸುತ್ತೋಲೆ ಹೊರಡಿಸಿ ಸಂವಿಧಾನ ಕರ್ತೃಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ನಗರ ಪೊಲೀಸ್ ಕಮಿಷನರ್ ಅವರಿಗೆ ಭಾರತೀಯ ಸಂವಿಧಾನ ರಕ್ಷಣಾ ಸಮಿತಿ ದೂರು ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.