ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು.

ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರೋಹನ್ ‘ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ’ವನ್ನು ಸ್ಥಾಪಿಸಿದ್ದರು. ರೋಹನ್ ಅವರಿಗೆ ಇದು ಎರಡನೇ ಮದುವೆಯಾಗಿದ್ದು, 2011ರ ಜೂನ್ನಲ್ಲಿ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸ್ ಅವರ ಪುತ್ರಿ ಲಕ್ಷ್ಮಿ ವೇಣು ಅವರನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ 2013 ರಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ವರದಿಯಾಗಿತ್ತು.

2015ರ ಎಪ್ರಿಲ್ ನಲ್ಲಿ ರೋಹನ್- ಲಕ್ಷ್ಮಿ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 2015ರ ನವೆಂಬರಿನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು. ಆದರೆ 2014ರ ಸೆಪ್ಟೆಂಬರ್ನಲ್ಲಿ ಲಕ್ಷ್ಮಿಯ ಸಹೋದರ ಸುದರ್ಶನ್ ಅವರ ವಿವಾಹ ಸಮಾರಂಭದಲ್ಲಿ ನಾರಾಯಣ ಮೂರ್ತಿ ಕುಟುಂಬ ಗೈರು ಹಾಜರಾದಾಗ ದಂಪತಿ ಮಧ್ಯೆ ಭಿನ್ನಾಭಿಪ್ರಾಯ ಇರುವ ವಿಚಾರ ಬೆಳಕಿಗೆ ಬಂದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…