ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು ಒಂದು ಎಕರೆ ಜಾಗದಲ್ಲಿ ಐದು ಲಕ್ಷ ರೂ. ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವೀರಣ್ಣ ಅವರು ಅಪ್ಪಟ ಸಾವಯವ ಕೃಷಿಕ. 20 ವರ್ಷಗಳಿಂದ ಸುತ್ತಮುತ್ತಲ ಹಳ್ಳಿಗರಿಗೆ ಇವ್ರೇ ಕೃಷಿ ಸಂಪನ್ಮೂಲ ವ್ಯಕ್ತಿಯಾಗಿ ಸಲಹೆ ನೀಡುತ್ತಿದ್ದಾರೆ. ಸಮೀಪದ ಕಾಡಲ್ಲಿ ಅನಾವಶ್ಯಕವಾಗಿ ನೀರು ಹರಿದು ಹೋಗುತ್ತಿದ್ದ ನೀರನ್ನು ಗೋಕಟ್ಟೆಗೆ ತಿರುಗಿಸಿದ್ದಾರೆ. ಈಗ ಗೋಕಟ್ಟೆ ನೀರಿನಿಂದ ತುಂಬಿದ್ದು, ಜಾನುವಾರುಗಳಲ್ಲದೇ ಕಾಡುಪ್ರಾಣಿಗಳ ದಾಹವೂ ನೀಗುತ್ತಿದೆ. ಗೋಕಟ್ಟೆ ನಿರ್ಮಿಸಲು ಇವರು ಬೇರೆಯವರಿಂದ ಚಿಕ್ಕಾಸು ಕೇಳಿರಲಿಲ್ಲ.

ಆದರೆ ಸ್ವಾಮೀಜಿಯೊಬ್ಬರು ಸ್ವಂತ ಹಣದಲ್ಲಿ ಕೆರೆ ನಿರ್ಮಿಸಿದ್ರೆ ಸಾರ್ವಜನಿಕರದ್ದು ಅನ್ನಿಸಿಕೊಳ್ಳಲ್ಲ. ಹಾಗಾಗಿ ಜನರು ನೀಡುವ ಹಣ ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಸ್ವಾಮೀಜಿಗಳ ಸಲಹೆ ಮೇರೆಗೆ ಜನ ನೀಡಿದಷ್ಟು ಹಣ ಪಡೆದುಕೊಂಡಿದ್ದರು. ಈ ಕಾಲದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡೋರು ಕಡಿಮೆ. ದನಕರುಗಳಿಗಾಗಿ ಗೋಕಟ್ಟೆ ನಿರ್ಮಿಸಿದ ವೀರಣ್ಣ ನಿಜಕ್ಕೂ ಇತರರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…