ಸುದ್ದಿ

‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

35

ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ.

ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ. ಆದ್ದರಿಂದ ಮಾರಾಟ ಮುಂದಕ್ಕೆ ಹೋಗಿತ್ತು.

ಈ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಬಂಡವಾಳ ಹಿಂತೆಗೆತದ ಗುರಿ ಇರಿಸಿಕೊಳ್ಳಲಾಗಿದ್ದು, ಆ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಕಂಪೆನಿಗಳ ಮಾರಾಟವು ಪ್ರಮುಖವಾಗಿದೆ.

“ಈ ವರ್ಷದೊಳಗೆ ಬಂಡವಾಳ ಹಿಂತೆಗೆತ ಪೂರ್ತಿ ಆಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ವಾಸ್ತವ ಸ್ಥಿತಿ ಮುಖ್ಯವಾಗುತ್ತದೆ” ಎಂದು ನಿರ್ಮಲಾ ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…